Wednesday, May 27, 2026
ದೆಹಲಿರಾಜ್ಯಸುದ್ದಿ

8 ಗಂಟೆ ಆಗಸದಲ್ಲೇ ಹಾರಾಟ : ಸ್ಯಾನ್ ಫ್ರಾನ್ಸಿಸ್ಕೋಗೆ ಹೊರಟಿದ್ದ ಏರ್ ಇಂಡಿಯಾ ವಿಮಾನ ದೆಹಲಿಗೆ ವಾಪಸ್ – ಕಹಳೆ ನ್ಯೂಸ್

ನವದೆಹಲಿ: 230 ಪ್ರಯಾಣಿಕರನ್ನು ಹೊತ್ತು ಸ್ಯಾನ್ ಫ್ರಾನ್ಸಿಸ್ಕೋಗೆ ಹೊರಟಿದ್ದ ಏರ್ ಇಂಡಿಯಾ ವಿಮಾನ ತಾಂತ್ರಿಕ ದೋಷದಿಂದಾಗಿ  8 ಗಂಟೆಗಳ ಕಾಲ ಆಗಸದಲ್ಲೇ ಹಾರಾಟ ನಡೆಸಿ ದೆಹಲಿಗೆ  ವಾಪಸ್ ಆಗಿದೆ.

ಮೇ 27ರಂದು ದೆಹಲಿಯಿಂದ ಸ್ಯಾನ್ ಫ್ರಾನ್ಸಿಸ್ಕೋಗೆ  ಹೊರಟಿದ್ದ ಎಐ173 ವಿಮಾನವು ಮೂರು ಗಂಟೆಗಳ ಹಾರಾಟ ನಡೆಸಿ ಬಳಿಕ ತಾಂತ್ರಿಕ ದೋಷ ಹಿನ್ನೆಲೆ ಚೀನಾ ವಾಯುಪ್ರದೇಶದಿಂದ ಯೂಟರ್ನ್ ತೆಗೆದುಕೊಂಡು ದೆಹಲಿಗೆ ಹಿಂತಿರುಗಿದೆ. ಸದ್ಯ ವಿಮಾನ ದೆಹಲಿಯಲ್ಲಿ ಸುರಕ್ಷಿತವಾಗಿ ಲ್ಯಾಂಡ್ ಆಗಿದ್ದು, ತಾಂತ್ರಿಕ ಪರಿಶೀಲನೆ ನಡೆಯಲಿದೆ ಎಂದು ಏರ್ ಇಂಡಿಯಾ ಸಂಸ್ಥೆ ತಿಳಿಸಿದೆ. ಇದನ್ನೂ ಓದಿ: ನಾವು ಕಳವಳ ವ್ಯಕ್ತಪಡಿಸಿದೆವು, ಸಿಎಂ ಸಿದ್ದರಾಮಯ್ಯ ಸೈಲೆಂಟ್ ಆಗಿದ್ರು: ಹೆಚ್.ಕೆ.ಪಾಟೀಲ್

ಪ್ರಯಾಣಿಕರಿಗೆ ಆಗಿರುವ ಅನಾನುಕೂಲತೆಗೆ ನಾವು ವಿಷಾದಿಸುತ್ತೇವೆ. ಪ್ರಯಾಣಿಕರನ್ನು ನಿಗದಿತ ಸ್ಥಳಗಳಿಗೆ ತಲುಪಿಸಲು ಪರ್ಯಾಯ ವ್ಯವಸ್ಥೆ ಮಾಡಲಾಗುತ್ತದೆ. ನಮ್ಮ ಸಿಬ್ಬಂದಿ ಪ್ರಯಾಣಿಕರಿಗೆ ಊಟದ ವ್ಯವಸ್ಥೆ, ಹೋಟೆಲ್ ಸೇರಿದಂತೆ ಎಲ್ಲಾ ರೀತಿಯ ನೆರವನ್ನು ನೀಡಲಾಗುತ್ತಿದೆ ಎಂದು ಸಂಸ್ಥೆ ಹೇಳಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು