
ದಾವಣಗೆರೆ : ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿದ್ದನ್ನು ನೆನೆದು ಸಿದ್ದರಾಮಯ್ಯ ಸಂಪುಟದಲ್ಲಿ ಉನ್ನತ ಶಿಕ್ಷಣ ಸಚಿವರಾಗಿದ್ದ ಎಂ.ಸಿ ಸುಧಾಕರ್ ಭಾವುಕರಾದರು.
ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ (Siddarmaiah) ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ್ದನ್ನು ನೆನೆದು ಭಾವುಕರಾದರು. ಸಿದ್ದರಾಮಯ್ಯನವರನ್ನು ಕಳೆದ ಎರಡು, ಮೂರು ದಿನಗಳಿಂದ ನೋಡಲಾಗುತ್ತಿಲ್ಲ. ಎಲ್ಲಾ ವರ್ಗಗಳನ್ನು ಸಮಾನವಾಗಿ ತೆಗೆದುಕೊಂಡು ಹೋಗಿ, ಒಂದು ಜಾತಿಗೆ ಸೀಮಿತವಾಗದೇ ಎಲ್ಲಾ ಸಮುದಾಯಕ್ಕೆ ಸಮಾನತೆ ನೀಡಿದ ವ್ಯಕ್ತಿ ಎಂದರೆ ಅದು ಸಿದ್ದರಾಮಯ್ಯನವರು. ಆದರೆ ಅಂತಹ ವ್ಯಕ್ತಿಯನ್ನು ನೋಡಲಾಗಲಿಲ್ಲ ಎಂದು ಕಣ್ತುಂಬಿಕೊಂಡರು.
ರಾಜಕಾರಣದಲ್ಲಿ ಮೇಲ್ಫಂಥಿಯನ್ನು ಹಾಕಿಕೊಟ್ಟಿದ್ದರು. ಒಬ್ಬ ರಾಜಕಾರಣಿಯ ವ್ಯಕ್ತಿತ್ವ ಹೇಗೆ ಇರುತ್ತೆ ಎನ್ನುವುದನ್ನು ತಿಳಿಸಿಕೊಟ್ಟಿದ್ದರು. ಅಲ್ಲದೇ ಇದರಿಂದ ಕಾಂಗ್ರೆಸ್ ಪಕ್ಷದ ವರ್ಚಸ್ಸು ಕೂಡ ಸಾಕಷ್ಟು ವೃದ್ಧಿಯಾಗಿದೆ. ಅಧಿಕಾರ ಯಾರಿಗೂ ಶಾಶ್ವತ ಅಲ್ಲ ಎಂದು ಅವರ ಅನುಭವ ನಮಗೆಲ್ಲ ಪಾಠ ಹೇಳಿದೆ. ನಾಳೆ ಸಭೆ ನಡೆಯಲಿದೆ, ಸಮಯ ಹಾಗೂ ಸ್ಥಳ ನಿಗದಿಯಾಗಿಲ್ಲ. ಶಾಸಕಾಂಗದ ಸಭೆಯಾದ ಬಳಿಕ ಅಧಿಕೃತವಾಗಿ ಡಿಕೆಶಿಯವರನ್ನು (DK Shivakumar) ಸಿಎಂ ಆಗುತ್ತಾರೆ. ಡಿಕೆಶಿಯವರು ಸಿಎಂ ಆಗುವುದಕ್ಕೆ ಯಾವುದೇ ಅಡ್ಡಿ ಅತಂಕವಿಲ್ಲ ಎಂದರು.










