
ನವದೆಹಲಿ/ವಾಷಿಂಗ್ಟನ್: ಭಾರತ ಮತ್ತು ಅಮೆರಿಕದ ವ್ಯಾಪಾರ ಒಪ್ಪಂದಕ್ಕೆ ಸಂಬಂಧಿಸಿದ ಮಾತುಕತೆಗಳು 99% ಪೂರ್ಣಗೊಂಡಿದೆ. ಶೀಘ್ರದಲ್ಲೇ ಅಂತಿಮ ಒಪ್ಪಂದ ಏರ್ಪಡುವ ನಿರೀಕ್ಷೆಯಿದೆ ಎಂದು ಯುಎಸ್ ರಾಯಭಾರಿ ಸೆರ್ಗಿಯೊ ಗೋರ್ ಹೇಳಿದ್ದಾರೆ.
ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (IIT) ದೆಹಲಿಯಲ್ಲಿ ʻಯುಎಸ್ ಇಂಡಿಯಾ ಟ್ರಸ್ಟ್ ಇನಿಶಿಯೇಟಿವ್: ಅಡ್ವಾನ್ಸಿಂಗ್ ಪಾರ್ಟ್‌ನರ್‌ಶಿಪ್ ಇನ್ ರಿಸರ್ಚ್ ಅಂಡ್ ಇನ್ನೋವೇಶನ್ʼ ವಿಷಯ ಕುರಿತು ನಡೆದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.











