Monday, June 1, 2026
ಜಿಲ್ಲೆದೆಹಲಿಬೆಂಗಳೂರುರಾಜ್ಯಸುದ್ದಿ

ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ ದರ 42 ರೂ. ಏರಿಕೆ! -ಕಹಳೆ ನ್ಯೂಸ್

ನವದೆಹಲಿ/ಬೆಂಗಳೂರು: ಈಗಾಗಲೇ ಪೆಟ್ರೋಲ್‌, ಡೀಸೆಲ್‌, ಸಿಎನ್‌ಜಿ ದರ ಏರಿಕೆಯಿಂದ ಜನ ತತ್ತರಿಸಿದ್ದಾರೆ. ಈ ಮಧ್ಯೆ ಕೇಂದ್ರ ಸರ್ಕಾರ ವಾಣಿಜ್ಯ ಸಿಲಿಂಡರ್‌ ಬಳಕೆದಾರರಿಗೆ ಶಾಕ್‌ ಕೊಟ್ಟಿದೆ. ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್‌ ದರ ಭಾರೀ ಏರಿಕೆ ಮಾಡಿದೆ. ಪರಿಷ್ಕೃತ ದರ ಇಂದಿನಿಂದಲೇ ಜಾರಿಯಾಗಲಿದೆ.

ಜಾಹೀರಾತು

ದೆಹಲಿಯಲ್ಲಿ 19 ಕೆಜಿಯ ವಾಣಿಜ್ಯ ಬಳಕೆ ಸಿಲಿಂಡರ್‌ ದರ 42 ರೂ. ಹೆಚ್ಚಾಗಿದ್ದು, ಪ್ರತಿ ಸಿಲಿಂಡರ್‌ ಬೆಲೆ 3,113.5 ರೂ.ಗಳಿಗೆ ತಲುಪಿದ್ದರೆ, ಬೆಂಗಳೂರಿನಲ್ಲಿ 46 ರೂ.ಗಳಷ್ಟು ಹೆಚ್ಚಳವಾಗಿ ಪ್ರತಿ ಸಿಲಿಂಡರ್ ದರ 3,198 ರೂ.ಗಳಿಗೆ ಏರಿಕೆಯಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಕೋಲ್ಕತ್ತಾದಲ್ಲಿ 19 ಕೆಜಿ ಸಿಲಿಂಡರ್‌ ದರ 53.5 ರೂ. ಹೆಚ್ಚಾಗಿದ್ದು, 3,255.5 ರೂ. ತಲುಪಿದೆ. ಇದರೊಂದಿಗೆ 5 ಕೆಜಿ ಫ್ರೀ ಟ್ರೇಡ್ ಎಲ್‌ಪಿಜಿ (FTL) ಸಿಲಿಂಡರ್‌ಗಳ ಮೇಲಿನ ಬೆಲೆ 11 ರೂ. ಹೆಚ್ಚಿಸಿದ್ದು, ಪ್ರತಿ ಸಿಲಿಂಡರ್‌ ಬೆಲೆ 821.5 ರೂ.ಗಳಿಗೆ ತಲುಪಿದೆ.

ಗೃಹ ಬಳಕೆಯ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯಲ್ಲಿ ಯಾವುದೇ ಬದಲಾವಣೆ ಆಗಿಲ್ಲ ಎಂದು ಕೇಂದ್ರ ಸರ್ಕಾರ ತಿಳಿಸಿದೆ.

1 ತಿಂಗಳಲ್ಲಿ 2ನೇ ಬಾರಿಗೆ ದರ ಏರಿಕೆ?
ಇದು ಕಳೆದ ಮೇ 1 ರಿಂದ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ಮೇಲೆ 2ನೇ ಬಾರಿಗೆ ಮಾಡಿದ ಬೆಲೆ ಏರಿಕೆಯಾಗಿದೆ. ಪಂಚ ರಾಜ್ಯಗಳ ಚುನಾವಣೆ ಮುಗಿದ ಬೆನ್ನಲ್ಲೇ ಕೇಂದ್ರ ಸರ್ಕಾರ ಮೇ 1 ರಂದು ಏಕಾಏಕಿ ಪ್ರತಿ ವಾಣಿಜ್ಯ ಸಿಲಿಂಡರ್‌ ಮೇಲಿನ ಬೆಲೆಯನ್ನು 993 ರೂ.ಗಳಷ್ಟು ಹೆಚ್ಚಳ ಮಾಡಿತ್ತು. ಆದಾಗ್ಯೂ ತೈಲ ಕಂಪನಿಗಳು ಸಾಕಷ್ಟು ನಷ್ಟ ಅನುಭವಿಸುತ್ತಿರುವುದರಿಂದ ಬೆಲೆ ಏರಿಕೆಯು ಅನಿವಾರ್ಯವಾಗಿದೆ ಎಂದು ಸರ್ಕಾರ ಹೇಳಿದೆ.

ಶುಕ್ರವಾರ ನಡೆದ ಅಂತರ ಸಚಿವಾಲಯದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ್ದ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯದ ಜಂಟಿ ಕಾರ್ಯದರ್ಶಿ ಸುಜಾತಾ ಶರ್ಮಾ, ಕೇಂದ್ರ ಸರ್ಕಾರವು ಕಾರ್ಯತಂತ್ರದ ನಿಕ್ಷೇಪಗಳನ್ನ ನಿರ್ಮಿಸಲು ಕೆಲಸ ಮಾಡುತ್ತಿದೆ. ತೈಲ ಮಾರುಕಟ್ಟೆ ಕಂಪನಿಗಳಿಗೆ ಕನಿಷ್ಠ 30 ದಿನಗಳ ಎಲ್‌ಪಿಜಿ ನಿಕ್ಷೇಪ ಕಾಯ್ದುಕೊಳ್ಳಲು ನಿರ್ದೇಶನ ನೀಡಿದೆ ಎಂದು ಹೇಳಿದ್ದರು.