Monday, June 1, 2026
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಮಜಿ ವೀರಕಂಭದಲ್ಲಿ 2026-27 ನೇ ಸಾಲಿನ ಶಾಲಾ ಪ್ರಾರಂಭೋತ್ಸವ -ಕಹಳೆ ನ್ಯೂಸ್

ಕಲ್ಲಡ್ಕ,: ರಜಾ ಅವಧಿ ಕಳೆದು ಶಾಲೆಯು ತೆರೆದಿದೆ, ಹಬ್ಬದ ವಾತಾವರಣ ಮೂಡಿದೆ ಶಿಕ್ಷಣದ ಕ್ರಾಂತಿಯಿಂದ ಸರಕಾರಿ ಮತ್ತು ಖಾಸಗಿ ಶಾಲೆಗಳ ನಡುವಿನ ಪೈಪೋಟಿಯು ಏರ್ಪಟ್ಟಿದೆ, ಸರ್ಕಾರಿ ಶಾಲೆಗಳು ಬಹಳ ಉತ್ತಮ ಗುಣಮಟ್ಟವನ್ನು ಹೊಂದಿದ್ದು ಸಮಾಜದ ಎಲ್ಲಾ ವರ್ಗದ ಮಕ್ಕಳಿಗೂ ಸಮಾನ ಶಿಕ್ಷಣದ ಅವಕಾಶವನ್ನು ಒದಗಿಸುತ್ತಿವೆ ಉಚಿತವಾದ ಶಿಕ್ಷಣ ಮತ್ತು ದಾಸೋಹ ಕಾರ್ಯಕ್ರಮದ ಮೂಲಕ ಉತ್ತಮ ಭವಿಷ್ಯ ರೂಪಿಸಿಕೊಳ್ಳಲು ಸಹಾಯವಾಗುತ್ತದೆ, ಸರ್ಕಾರಿ ಶಾಲೆಗಳಲ್ಲಿ ಪಠ್ಯದ ಜೊತೆಗೆ ಮೌಲ್ಯ ಶಿಕ್ಷಣ ಕ್ರೀಡೆ ಸಾಂಸ್ಕೃತಿಕ ಚಟುವಟಿಕೆಗಳು ಹಾಗೂ ಜೀವನ ಕೌಶಲ್ಯಗಳಿಗೂ ಮಹತ್ವ ನೀಡಲಾಗುತ್ತಿದೆ, ಅನೇಕ ಮಹನೀಯರು ಸರ್ಕಾರಿ ಶಾಲೆಗಳಲ್ಲಿ ಶಿಕ್ಷಣ ಪಡೆದು ಉನ್ನತ ಹುದ್ದೆಗಳಲ್ಲಿ ಇದ್ದಾರೆ ಎಲ್ಲರೂ ಇದರ ಸದುಪಯೋಗ ಪಡೆದುಕೊಳ್ಳಿ ಎಂಬುದಾಗಿ ವೀರಕಂಭ ಪಂಚಾಯತ್ ಆಡಳಿತ ಅಧಿಕಾರಿ ದಿನೇಶ್ ಹೇಳಿದರು.

ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಅವರು ಜೂನ್ 1 ಸೋಮವಾರ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಮಜಿ ವೀರಕಂಭ ಇಲ್ಲಿ 2026 -27 ನೇ ಸಾಲಿನ ಶಾಲಾ ಪ್ರಾರಂಭೋತ್ಸವವನ್ನು ಉದ್ಘಾಟಿಸಿ ಮಾತನಾಡಿದರು.

ಕಾರ್ಯಕ್ರಮದ ಮೊದಲು ಶಾಲೆಯ ಎಲ್ಲಾ ಮಕ್ಕಳನ್ನು ಮೆರವಣಿಗೆ ಮೂಲಕ ಸ್ವಾಗತಿಸಿ ಹೂ ಸಿಂಪಡಿಸಿ ಬರಮಾಡಿಕೊಳ್ಳಲಾಯಿತು. ನಂತರ ಶಾಲಾ ‘ಅಕ್ಷಯ ಬುಟ್ಟಿಗೆ ” ಆರತಿ ಮಾಡಿ ಗಣ್ಯರು ಹಾಗೂ ಮಕ್ಕಳ ಪೋಷಕರು ತಾವು ತಂದ ಅಕ್ಷರ ದಾಸೋಹ ಸಾಮಗ್ರಿಗಳನ್ನು ತುಂಬಿಸಿದರು.
ಸಭಾ ಕಾರ್ಯಕ್ರಮದಲ್ಲಿ ಶಾಲಾ ಶಿಕ್ಷಕರು ವಿಶೇಷವಾಗಿ ಈ ಸಾಲಿನಲ್ಲಿ ನೂತನವಾಗಿ ಶಾಲೆಗೆ ದಾಖಲಾತಿ ಪಡೆದ ಮಕ್ಕಳು ಹಾಗೂ ಮಕ್ಕಳ ಪೋಷಕರಿಗೆ ಪನ್ನೀರು ಸಿಂಪಡಿಸಿ, ಹೂ ಸಮರ್ಪಿಸಿ, ಆರತಿ ಬೆಳಗಿ ತಮ್ಮ ತರಗತಿಗಳಿಗೆ ಬರಮಾಡಿಕೊಂಡರು.
ಈ ಸಂದರ್ಭದಲ್ಲಿ ಸರಕಾರದಿಂದ ಸಿಗುವ ಉಚಿತ ಪಠ್ಯಪುಸ್ತಕ ವಿತರಿಸಲಾಯಿತು.
ಕಾರ್ಯಕ್ರಮದ ವೇದಿಕೆಯಲ್ಲಿ ರೋಟರಿ ಕ್ಲಬ್ ಬಿಸಿ ರೋಡ್ ಸಿಟಿ ಇದರ ವಲಯ ಸೇನಾನಿ ಗಣೇಶ್ ಶೆಟ್ಟಿ, ಜೆಸಿಐ ಬಿಸಿರೋಡು ಇದರ ಅಧ್ಯಕ್ಷರಾದ ಕಿಶೋರ್ ಆಚಾರ್ಯ, ವೀರ ಕಂಬ ಗ್ರಾಮ ಪಂಚಾಯಿತಿನ ನಿಕಟಪೂವ೯ಉಪಾಧ್ಯಕ್ಷ ಜನಾರ್ಧನ ಪೂಜಾರಿ,ಹಿರಿಯ ವಿದ್ಯಾರ್ಥಿ ಪ್ರಗತಿಪರ ಕೃಷಿಕರಾದ ಜಯಪ್ರಕಾಶ್ ತೆಕ್ಕಿಪಾಪು, ಶಾಲೆಗೆ ಉಚಿತವಾಗಿ ತರಕಾರಿ ಪೂರೈಸುವ ಚಂದ್ರಿಕಾ ವೆಜಿಟೇಬಲ್ಸ್ ಮೆಲ್ಕಾರ್ ಇದರ ಮಾಲಕರಾದ ಮಹಮದ್ ಶರೀಫ್, ಯುವ ವಾಹಿನಿ ಮಾಣಿ ಘಟಕ ಅಧ್ಯಕ್ಷರು ಹಾಗೂ ಶ್ರೀ ಸಾಯಿ ಇಂಜಿನಿಯರಿಂಗ್ ವರ್ಕ್ ಇದರ ಮಾಲಕರಾದ ಗಣೇಶ್, ಎಸ್.ಡಿ.ಎಂ.ಸಿ ಅಧ್ಯಕ್ಷರಾದ ಕೊರಕೊಪ್ಪ ನಾಯ್ಕ, ಉಪಸ್ಥಿತರಿದ್ದರು.

ಶಾಲಾಭಿವೃದ್ಧಿ ಸಮಿತಿಯ ಸದಸ್ಯರುಗಳು, ಮಕ್ಕಳ ಪೋಷಕರು, ಸಂಘ-ಸಂಸ್ಥೆಯ ಸದಸ್ಯರುಗಳು, ಶಾಲಾ ಹಿರಿಯ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳು ಹಾಗೂ ಸದಸ್ಯರುಗಳು, ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ಶಾಲೆಯನ್ನು ತಲಿರು ತೋರಣ ಹಾಗೂ ಬೇಲೂನುಗಳ ಮೂಲಕ ಸಿಂಗಾರಿಸಲಾಗಿತು.
ಶಾಲಾ ಮಕ್ಕಳು ಪ್ರಾರ್ಥಿಸಿ, ಶಾಲಾ ಮುಖ್ಯ ಶಿಕ್ಷಕಿ ಬೆನಡಿಕ್ಟಾ ಆಗ್ನೇಸ್ ಮಂಡೋನ್ಸ ಪ್ರಸ್ತಾವಿಕದೊಂದಿಗೆ ಸ್ವಾಗತಿಸಿ, ಶಿಕ್ಷಕ ತೌಸೀಫ್ ಅಹ್ಮದ್
ಶಾಲಾ ನೀತಿ ನಿಯಮಗಳ ಬಗ್ಗೆ ಮಾಹಿತಿ ನೀಡಿ. ದೈಹಿಕ ಶಿಕ್ಷಣ ಶಿಕ್ಷಕ ಇಂದುಶೇಖರ್ ವಂದಿಸಿದರು. ಹಿರಿಯ ಶಿಕ್ಷಕಿ ಸಂಗೀತ ಶರ್ಮ ಪಿ ಜಿ ಕಾರ್ಯಕ್ರಮ ನಿರೋಪಿಸಿದರು. ಶಾಲಾ ಶಿಕ್ಷಕಿಯರು ಸಹಕರಿಸಿದರು.