Thursday, July 23, 2026
ಜಿಲ್ಲೆದಕ್ಷಿಣ ಕನ್ನಡಪುತ್ತೂರುಶಿಕ್ಷಣಸುದ್ದಿ

ಪಟ್ಟೆ ಶ್ರೀ ಕೃಷ್ಣ ವಿದ್ಯಾ ಸಂಸ್ಥೆಗಳ 2026-27 ಶೈಕ್ಷಣಿಕ ವರ್ಷದ ಶಾಲಾ ಪ್ರಾರಂಭೋತ್ಸವ -ಕಹಳೆ ನ್ಯೂಸ್

ಪಟ್ಟೆ ಬಡಗನ್ನೂರು: “ಶಿಕ್ಷಣದಿಂದ ವಿದ್ಯಾರ್ಥಿಗಳು ಸಂಸ್ಕಾರವಂತರಾಗಬೇಕು, ಸತ್ಪ್ರಜೆಗಳಾಗಬೇಕು. ಶೈಕ್ಷಣಿಕವಾದ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುವ ಮೂಲಕ ವಿದ್ಯಾರ್ಥಿಗಳು ಅತ್ಯುತ್ತಮ ಸಾಧಕಾ ರಗಬೇಕೆಂದು”ಶ್ರೀಕೃಷ್ಣ ವಿದ್ಯಾ ಸಂಸ್ಥೆಗಳ ಅಧ್ಯಕ್ಷರಾದ ಶ್ರೀ ಗೋಪಾಲಕೃಷ್ಣ ಭಟ್ ಶಾಲಾ ಪ್ರಾರಂಭೋತ್ಸವವನ್ನು ದೀಪ ಬೆಳಗಿಸಿ, ಉದ್ಘಾಟಿಸಿ ವಿದ್ಯಾರ್ಥಿಗಳಿಗೆ ಕರೆ ನೀಡಿದರು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜೂನ್ ಒಂದರಂದು ಪಟ್ಟೆ ಶ್ರೀ ಕೃಷ್ಣ ವಿದ್ಯಾ ಸಂಸ್ಥೆಗಳಲ್ಲಿ ನೂತನವಾಗಿ ದಾಖಲೆಗೊಂಡ ಹಾಗೂ ಇತರ ವಿದ್ಯಾರ್ಥಿಗಳನ್ನು ಶಾಲಾ ಪ್ರವೇಶದ್ವಾರದಿಂದ ಬ್ಯಾಂಡ್ ಸೆಟ್ ನೊಂದಿಗೆ ಕರೆತರಲಾಯಿತು. ಎಲ್ಲಾ ವಿದ್ಯಾರ್ಥಿಗಳಿಗೆ ಆರತಿ ಬೆಳಗಿ, ತಿಲಕವನ್ನಿಟ್ಟು ತರಗತಿಯ ಸ್ವಾಗತಿಸಲಾಯಿತು.

ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಶ್ರೀಕೃಷ್ಣ ವಿದ್ಯಾ ಸಂಸ್ಥೆಗಳ ಆಡಳಿತ ಮಂಡಳಿಯ ನಿರ್ದೇಶಕರಾದ ಶ್ರೀ ಗಣರಾಜ ಕುಂಬ್ಳೆ, ಸಂಚಾಲಕರಾದ ಶ್ರೀ
ವಿಘ್ನೇಶ್ ಹಿರಣ್ಯ, ಪ್ರೌಢಶಾಲೆ SDMC ಅಧ್ಯಕ್ಷರಾದ ಶ್ರೀ ಲಿಂಗಪ್ಪಗೌಡ ಮೋಡಿಕೆ, ಪ್ರಾಥಮಿಕ ಶಾಲೆ SDMC ಅಧ್ಯಕ್ಷರಾದ ಶ್ರೀ ಕೇಶವ ಪ್ರಸಾದ್ ನೀಲಗಿರಿ, ಆಂಗ್ಲ ಮಾಧ್ಯಮ ಶಾಲೆಯ ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷರಾದ ಶ್ರೀ ಸತೀಶ್ ಕೊಪ್ಪಳ, ಆಂಗ್ಲ ಮಾಧ್ಯಮ ಶಾಲೆಯ ಮುಖ್ಯ ಗುರುಗಳಾದ ಶ್ರೀಮತಿ ಪುಷ್ಪಾವತಿ ಡಿ. ಉಪಸ್ಥಿತರಿದ್ದರು. ಪ್ರಾರ್ಥಮಿಕ ಶಾಲಾ ಮುಖ್ಯ ಗುರುಗಳಾದ ಶ್ರೀ ರಾಜಗೋಪಾಲ್.ಎನ್ ಸ್ವಾಗತಿಸಿ, ಪ್ರೌಢಶಾಲಾ ಮುಖ್ಯ ಗುರುಗಳಾದ ಶ್ರೀಮತಿ ಸುಮನ ಮಾತಾಜಿ ವಂದಿಸಿದರು. ಪ್ರೌಢಶಾಲಾ ಶಿಕ್ಷಕರಾದ ಶ್ರೀ ವಿಶ್ವನಾಥ್ ಕಾರ್ಯಕ್ರಮ ನಿರೂಪಿಸಿದರು. ಸಂಸ್ಥೆ ಎಲ್ಲ ಶಿಕ್ಷಕರುಮತ್ತು ಸಿಬ್ಬಂದ್ದಿ ವರ್ಗದವರು ವಿವಿಧ ಕಾರ್ಯಕ್ರಮಗಳಲ್ಲಿ ಸಹಕರಿಸಿದರು.