Recent Posts

Friday, September 11, 2026
ದೆಹಲಿರಾಜ್ಯಸುದ್ದಿ

IPL ಗೆಲುವಿನ ಬೆನ್ನಲ್ಲೇ ವೃಂದಾವನಕ್ಕೆ ಭೇಟಿ ನೀಡಿದ ವಿರುಷ್ಕಾ -ಕಹಳೆ ನ್ಯೂಸ್

ಲಕ್ನೋ: ಐಪಿಎಲ್ 2026ರಲ್ಲಿ   ಗುಜರಾತ್ ಟೈಟಾನ್ಸ್ ವಿರುದ್ಧ ಭರ್ಜರಿ ಜಯ ಸಾಧಿಸಿ ಸತತ ಎರಡನೇ ಗೆಲುವಿನ ಸಂಭ್ರಮದಲ್ಲಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು  ತಂಡದ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ  ಹಾಗೂ ಪತ್ನಿ ಅನುಷ್ಕಾ ಶರ್ಮಾ  ವೃಂದಾವನಕ್ಕೆ ಭೇಟಿ ನೀಡಿದ್ದಾರೆ.
ಸೋಮವಾರ (ಜೂ.1) ವೃಂದಾವನದಲ್ಲಿರುವ  ಪ್ರಸಿದ್ಧ ಆಧ್ಯಾತ್ಮಿಕ ಗುರು ಪ್ರೇಮಾನಂದ್ ಮಹಾರಾಜರ `ರಾಧಾ ಕೇಳಿ ಕುಂಜ್’ ಆಶ್ರಮಕ್ಕೆ   ಭೇಟಿ ನೀಡಿದ್ದಾರೆ. ಈ ವೇಳೆ ಮಹಾರಾಜರ ದರ್ಶನ ಪಡೆದು ಆಶೀರ್ವಾದ ಪಡೆದುಕೊಂಡಿದ್ದಾರೆ. ಸದ್ಯ ಕೊಹ್ಲಿ ಮತ್ತು ಅನುಷ್ಕಾ ಆಶ್ರಮದಿಂದ ಹೊರಬರುತ್ತಿರುವ ಫೋಟೋ ಹಾಗೂ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿವೆ.

ಜಾಹೀರಾತು

ಕೊಹ್ಲಿ ಮತ್ತು ಅನುಷ್ಕಾ ವೃಂದಾವನಕ್ಕೆ ಭೇಟಿ ನೀಡುತ್ತಿರುವುದು ಇದೇ ಮೊದಲಲ್ಲ. ಇದಕ್ಕೂ ಮುನ್ನ ಹಲವು ಬಾರಿ ಭೇಟಿ ನೀಡಿದ್ದಾರೆ. ಎಂದಿನಂತೆ ಸರಳ ಉಡುಪಿನಲ್ಲಿ ಆಗಮಿಸಿ, ಮಹಾರಾಜರ ಆಶೀರ್ವಾದ ಪಡೆದುಕೊಂಡಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು