Wednesday, June 3, 2026
ಜಿಲ್ಲೆಸುದ್ದಿ

ಮುಧೋಳದಲ್ಲಿ ದಿಢೀರ್ ಭೂ ಕುಸಿತ : ಗ್ರಾಮಸ್ಥರಲ್ಲಿ ಆತಂಕ -ಕಹಳೆ ನ್ಯೂಸ್

ಬಾಗಲಕೋಟೆ: ಮುಧೋಳ ತಾಲೂಕಿನ ನಿಂಗಾಪುರ ಗ್ರಾಮದಲ್ಲಿ ದಿಢೀರ್ ಭೂ ಕುಸಿತ ಸಂಭವಿಸಿದ್ದು, ಗ್ರಾಮಸ್ಥರಲ್ಲಿ ಆತಂಕ ಮನೆ ಮಾಡಿದೆ.

ಜಾಹೀರಾತು

ಗ್ರಾಮದ ಕಬ್ಬಿನ ಗದ್ದೆಯೊಂದರಲ್ಲಿ ಯಾವುದೇ ಮುನ್ಸೂಚನೆ ಇಲ್ಲದೆ ಸುಮಾರು 20 ಅಡಿ ಆಳ 10 ಅಡಿ ಅಗಲ ಭೂಮಿ ಕುಸಿದಿದೆ. ಭೂಮಿ ದಿಢೀರ್ ಬಾಯಿ ತೆರೆದಿರುವ ದೃಶ್ಯ ಕಂಡ ಗ್ರಾಮಸ್ಥರು ಬೆಚ್ಚಿಬಿದ್ದಿದ್ದಾರೆ. ಭೂ ಕುಸಿತಕ್ಕೆ ನಿಖರ ಕಾರಣ ಏನು ಎಂಬುದು ಇನ್ನೂ ತಿಳಿದುಬಂದಿಲ್ಲ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಭೂ ವಿಜ್ಞಾನಿಗಳು ಹಾಗೂ ಸಂಬಂಧಪಟ್ಟ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಬೇಕು. ಭೂ ಕುಸಿತದ ಹಿಂದಿನ ಕಾರಣವನ್ನು ಪತ್ತೆಹಚ್ಚಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.