Friday, June 5, 2026
ಜಿಲ್ಲೆದಕ್ಷಿಣ ಕನ್ನಡಪುತ್ತೂರುಸುದ್ದಿ

ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ ಜೂನ್ 7ರಂದು ಸಾಮೂಹಿಕ ಸರಸ್ವತೀ ವಂದನೆ ಮತ್ತು ವಿದ್ಯಾ ಸಂಕಲ್ಪ -ಕಹಳೆ ನ್ಯೂಸ್

ಪುತ್ತೂರು : ದೇವಾಲಯ ಸಂವರ್ಧನಾ ಸಮಿತಿ ಕರ್ನಾಟಕ ಹಾಗೂ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಇವರ ಜಂಟಿ ಆಶ್ರಯದಲ್ಲಿ, ವಿದ್ಯಾರ್ಥಿಗಳಲ್ಲಿ ವಿದ್ಯೆ, ಸಂಸ್ಕಾರ ಮತ್ತು ಏಕಾಗ್ರತೆಯನ್ನು ಬೆಳೆಸುವ ಉದ್ದೇಶದಿಂದ ಜೂನ್ 7ರಂದು ಬೆಳಿಗ್ಗೆ 9 ರಿಂದ 11 ಗಂಟೆಯವರೆಗೆ ಸಾಮೂಹಿಕ “ಸರಸ್ವತೀ ವಂದನೆ” ಮತ್ತು “ವಿದ್ಯಾ ಸಂಕಲ್ಪ” ಕಾರ್ಯಕ್ರಮವು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ ನಡೆಯಲಿದೆ.

ಜಾಹೀರಾತು

ಈ ಕಾರ್ಯಕ್ರಮಕ್ಕೆ ಶ್ರೀ ಮುಂಡ್ಯತ್ತಾಯ ದೈವಸ್ಥಾನ ಪಾಂಗಳಾಯಿ, ಮುಳಿಯ ದೇವರಕಟ್ಟೆ, ಕೋರ್ಟ್ ರಸ್ತೆ, ಅಟಲ್ ಉದ್ಯಾನ ಕೊಂಬೆಟ್ಟು, ಮಾಸ್ಟರ್ ಪ್ಲಾನರಿ ಕಲ್ಲೇಗ, ಶ್ರೀ ಷಣ್ಮುಖ ಸುಬ್ರಹ್ಮಣ್ಯ-ಶ್ರೀ ಮಹಾವಿಷ್ಣು ದೇವಸ್ಥಾನ ಕೆಮ್ಮಿಂಜೆ ಹಾಗೂ ಶ್ರೀ ರಾಘವೇಂದ್ರ ಮಠ ಕಲ್ಲಾರೆ ಹಿಂದೂ ಧಾರ್ಮಿಕ ಶಿಕ್ಷಣ ಪ್ರಕಲ್ಪ ಕೇಂದ್ರಗಳು ಸಹಯೋಗ ನೀಡುತ್ತಿವೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಕಾರ್ಯಕ್ರಮದ ಅಂಗವಾಗಿ ವಿದ್ಯಾರ್ಥಿಗಳಿಂದ ವಿದ್ಯಾ ಸಂಕಲ್ಪ, ಮಕ್ಕಳಿಂದ ಪುಸ್ತಕಗಳಿಗೆ ಪುಷ್ಪಾರ್ಚನೆ ಹಾಗೂ ದೇವಳದ ವೈದಿಕರಿಂದ ಸರಸ್ವತೀ ಸೂಕ್ತ ಹವನ ನಡೆಯಲಿದೆ.

ಶಿಶು ಮಂದಿರದಿಂದ ಸ್ನಾತಕೋತ್ತರ ಪದವಿವರೆಗಿನ ಎಲ್ಲಾ ವಿದ್ಯಾರ್ಥಿಗಳು ಭಾಗವಹಿಸಬಹುದಾಗಿದೆ. ಭಾಗವಹಿಸುವ ವಿದ್ಯಾರ್ಥಿಗಳು ಸಾಂಪ್ರದಾಯಿಕ ಉಡುಗೆ ಧರಿಸಿ, ಒಂದು ಶಾಲಾ ಪುಸ್ತಕ ಅಥವಾ ಸುಜ್ಞಾನ ದೀಪಿಕೆ ಪುಸ್ತಕ ಹಾಗೂ ಮನೆಯಲ್ಲೇ ಬೆಳೆದ ಒಂದು ಬೊಗಸೆ ಹೂವನ್ನು ತರಬೇಕೆಂದು ಆಯೋಜಕರು ತಿಳಿಸಿದ್ದಾರೆ.

ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಸರಸ್ವತಿ ಮಾತೆಯ ಕೃಪೆಗೆ ಪಾತ್ರರಾಗುವಂತೆ ಮನವಿ ಮಾಡಲಾಗಿದೆ.