ಬೇರೆ ಎಲ್ಲದಕ್ಕೂ ಬೆಂಗಳೂರಿಗೆ ನಾನು ಬೇಕು, ಖಾತೆ ಕೊಡೋಕೆ ಏನ್ ಕಷ್ಟ?: ಡಿಕೆಶಿ ಎದುರೇ ರಾಮಲಿಂಗಾರೆಡ್ಡಿ ಆಕ್ರೋಶ – ಕಹಳೆ ನ್ಯೂಸ್

ಬೆಂಗಳೂರು: ರಾಜ್ಯ ಸಚಿವ ಸಂಪುಟದಲ್ಲಿ ಖಾತೆ ಹಂಚಿಕೆಯಾದ ಬೆನ್ನಲ್ಲೇ ತೀವ್ರ ಅಸಮಾಧಾನ ಸ್ಫೋಟಗೊಂಡಿದ್ದು, ಹಿರಿಯ ನಾಯಕ ಹಾಗೂ ಸಚಿವ ರಾಮಲಿಂಗಾರೆಡ್ಡಿ ಅವರು ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾಗಿರುವ ಮಾಹಿತಿ ಲಭ್ಯವಾಗಿದೆ.
ತಮಗೆ ಜಲಸಂಪನ್ಮೂಲ ಖಾತೆ ನೀಡಿರುವುದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಅವರು, ಬೆಂಗಳೂರು ಅಭಿವೃದ್ಧಿ ಖಾತೆ ನೀಡದಿದ್ದರೆ ಬೆಳಿಗ್ಗೆಯೇ ರಾಜೀನಾಮೆ ಪತ್ರ ಕಳುಹಿಸುವುದಾಗಿ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರಿಗೆ ನೇರ ಎಚ್ಚರಿಕೆ ನೀಡಿದ್ದಾರೆ.











