ಶ್ರೀಕೃಷ್ಣ ವಿದ್ಯಾಸಂಸ್ಥೆಯ 9ನೇ ತರಗತಿ ವಿದ್ಯಾರ್ಥಿನಿ ಅಹನಾ, ಎ. NMMS ಪರೀಕ್ಷೆಯಲ್ಲಿ ತೇರ್ಗಡೆಯಾಗಿ ವಿದ್ಯಾರ್ಥಿ ವೇತನಕ್ಕೆ ಆಯ್ಕೆ – ಕಹಳೆ ನ್ಯೂಸ್

ಪಟ್ಟೆ :ಶ್ರೀಕೃಷ್ಣ ವಿದ್ಯಾಸಂಸ್ಥೆಯ 9ನೇ ತರಗತಿ ವಿದ್ಯಾರ್ಥಿನಿ ಅಹನಾ, ಎ. NMMS ಪರೀಕ್ಷೆಯಲ್ಲಿ ತೇರ್ಗಡೆಯಾಗಿ ವಿದ್ಯಾರ್ಥಿ ವೇತನಕ್ಕೆ ಆಯ್ಕೆಯಾಗಿರುತ್ತಾರೆ.
ಇವರು ಈಶ್ವರಮಂಗಲದಲ್ಲಿರುವ ಶ್ರೀಯುತ ಅಶೋಕ ಎ ಹಾಗೂ ಯಶೋಧ ಇವರ ಪುತ್ರಿ. ಶ್ರೀ ಕೃಷ್ಣವಿದ್ಯಾ ಸಂಸ್ಥೆಗಳು ಗುಣಮಟ್ಟದ ಶಿಕ್ಷಣ ನೀಡುವಲ್ಲಿ ಶ್ರಮಿಸುತ್ತಿದೆ. ಶೈಕ್ಷಣಿಕ್ಷೇತ್ರದಲ್ಲಿ ಹಾಗೂ ಕ್ರೀಡಾ ಕ್ಷೇತ್ರದಲ್ಲಿ ರಾಜ್ಯ ಮತ್ತು ರಾಷ್ಟ್ರಮಟ್ಟದಲ್ಲಿ ಹೆಸರು ಪಡೆದುಕೊಂಡು ಸಂಸ್ಥೆಯಾಗಿದೆ. NMMS ಪರೀಕ್ಷೆಯಲ್ಲಿ ತೇರ್ಗಡೆ ಯಾಗಿ ವಿದ್ಯಾರ್ಥಿ ವೇತನಕ್ಕೆ ಆಯ್ಕೆಯಾಗಿರುವ ಕುಮಾರಿ ಅಹನಾ ಇವಳನ್ನು ಸಂಸ್ಥೆಯ ಅಧ್ಯಕ್ಷರಾದ ಶ್ರೀಮಾನ್ ಗೋಪಾಲಕೃಷ್ಣಭಟ್ ಹಾಗೂ ಆಡಳಿತ ಮಂಡಳಿಯ ಸದಸ್ಯರು , ಮುಖ್ಯ ಗುರುಗಳು ಅಭಿನಂದನೆಯನ್ನು ಸಲ್ಲಿಸಿರುತ್ತಾರೆ.











