Recent Posts

Sunday, June 7, 2026
ಸುದ್ದಿ

ಬೆಳಾಲು ಶ್ರೀ ಧ‌.ಮಂ.ಅ. ಪ್ರೌಢಶಾಲೆಯಲ್ಲಿ ಮಾಸ್ತಿ ವೆಂಕಟೇಶ್ ಅಯ್ಯಂಗಾರ್ ಜನ್ಮದಿನದ ಪ್ರಯುಕ್ತ ಸಂಸ್ಮರಣ ಕಾರ್ಯಕ್ರಮ – ಕಹಳೆ ನ್ಯೂಸ್

ಬೆಳಾಲು ಶ್ರೀ ಧ‌.ಮಂ.ಅ. ಪ್ರೌಢಶಾಲೆಯಲ್ಲಿ ಮಾಸ್ತಿ ವೆಂಕಟೇಶ್ ಅಯ್ಯಂಗಾರ್ ಜನ್ಮದಿನದ ಪ್ರಯುಕ್ತ ಜೂನ್ ೬ ರಂದು ಮಾಸ್ತಿ ಸಂಸ್ಮರಣ ಕಾರ್ಯಕ್ರಮ ಜರಗಿತು.

ಜಾಹೀರಾತು

ಮಾಸ್ತಿ ಅವರ ಭಾವಚಿತ್ರಕ್ಕೆ ಪುಷ್ಪಾರ್ಪಣೆ ಮಾಡಲಾಯಿತು‌. ವಿದ್ಯಾರ್ಥಿನಿ ಆಯಿಷತ್ ಹೈಪ ಮಾಸ್ತಿಯವರ ಪರಿಚಯವನ್ನು ಮಾಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಮುಖ್ಯೋಪಾಧ್ಯಾಯರಾದ ಜಯರಾಮ ಮಯ್ಯ ಮಾತನಾಡಿ, ಪುಸ್ತಕಗಳನ್ನು ಓದುವ ಹವ್ಯಾಸ ಬೆಳಸಿಕೊಳ್ಳುವದರೊಂದಿಗೆ ಅದರಲ್ಲಿರುವ ಮೌಲ್ಯವನ್ನು ಅಳವಡಿಸಿಕೊಳ್ಳಿ ಎಂದು ತಿಳಿಸಿದರು‌. ಶಿಕ್ಷಕ ಸುಮನ್ ಯು.ಎಸ್ ಮಾಸ್ತಿಯವರ ಕೃತಿಗಳನ್ನು ಪರಿಚಯಿಸಿದರು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಮಾಸ್ತಿಯವರ ಜ್ಞಾನಪೀಠ ಪುರಸ್ಕೃತ ಚಿಕವೀರ ರಾಜೇಂದ್ರ ಕೃತಿಯನ್ನು ಪ್ರದರ್ಶಿಸಲಾಯಿತು. ಮಾಸ್ತಿ ವೆಂಕಟೇಶ್ ಅಯ್ಯಂಗಾರರ ವಿಡಿಯೋ ತುಣುಕನ್ನು ಪ್ರದರ್ಶಿಸಲಾಯಿತು. ಕಾರ್ಯಕ್ರಮದಲ್ಲಿ ಶಾಲಾ ಶಿಕ್ಷಕ ವೃಂದದವರು ಉಪಸ್ಥಿತರಿದ್ದರು. ವಿದ್ಯಾರ್ಥಿನಿ ವಿದ್ಯಾ ಕಾರ್ಯಕ್ರಮವನ್ನು ನಿರೂಪಿಸಿ ವಂದಿಸಿದರು.