Recent Posts

Sunday, June 7, 2026
ಸುದ್ದಿ

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಕುಂದಾಪುರ ತಾಲೂಕು ಶ್ರೀ ಡಿ. ದೇವರಾಜ ಅರಸು ಮೆಟ್ರಿಕ್ ನಂತರದ ಬಾಲಕಿಯರ ನಿಲಯ ಕುಂದಾಪುರ ವಿಭಜನೆ BCDW -2461 ಖಾರ್ವಿಕೇರಿ ಇಲ್ಲಿ ಅಂತಿಮ ವರ್ಷದ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭ

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಕುಂದಾಪುರ ತಾಲೂಕು ಶ್ರೀ ಡಿ. ದೇವರಾಜ ಅರಸು ಮೆಟ್ರಿಕ್ ನಂತರದ ಬಾಲಕಿಯರ ನಿಲಯ ಕುಂದಾಪುರ ವಿಭಜನೆ bcwd 2461 ಖಾರ್ವಿಕೇರಿ ಇಲ್ಲಿ ಅಂತಿಮ ವರ್ಷದ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭ ನಡೆಯಿತು ಮತ್ತು ಈ ವಿದ್ಯಾರ್ಥಿ ನಿಲಯದಲ್ಲಿ ಓದಿ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ಹತ್ತನೇ RANK ಪಡೆದ ಕುಮಾರಿ ಪ್ರಜ್ಞಾ ಮತ್ತು ರಾಜ್ಯಕ್ಕೆ15ನೇ RANK ಪಡೆದ ಧನ್ಯ ಮತ್ತು ಡಿಸ್ಟಿಂಕ್ಷನ್ ಪಡೆದ 10 ವಿದ್ಯಾರ್ಥಿಗಳನ್ನು , ಅಲ್ಲದೆ ನಮ್ಮ ಮೆಟ್ರಿಕ್ ಪೂರ್ವ ಬಾಲಕಿಯರ ವಿದ್ಯಾರ್ಥಿ ನಿಲಯ ಕುಂದಾಪುರ ಟೌನ್ BCWD 1164 ವಿದ್ಯಾರ್ಥಿನಿಲಯದಲ್ಲಿ ಓದಿ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಡಿಸ್ಟಿಂಕ್ಷನ್ ಪಡೆದ 4 ವಿದ್ಯಾರ್ಥಿಗಳನ್ನು ಆತ್ಮೀಯವಾಗಿ ಸನ್ಮಾನಿಸಲಾಯಿತು..
ಕಾರ್ಯಕ್ರಮ ಉದ್ಘಾಟಕರಾಗಿ ಶ್ರೀ ನಂಜ ನಾಯ್ಕ , ಪೊಲೀಸ್ ಉಪ ನಿರೀಕ್ಷಕರು, ಕುಂದಾಪುರ ಪೊಲೀಸ್ ಠಾಣೆ ಇವರು ಆಗಮಿಸಿ ನಿಲಯದ ಎಲ್ಲಿ,ಯಾವ ಸಮಯದಲ್ಲಿ ಏನೇ ಸಮಸ್ಯೆ ಆದರೂ ಸ್ಪಂದಿಸುವುದು ನಮ್ಮ ಕರ್ತವ್ಯ ಆ ಮುಖೇನ ಸಮಸ್ಯೆಗಳನ್ನು ಬಚ್ಚಿಟ್ಟು ಕೊಳ್ಳದೆ ಪರಿಹರಿಸಿಕೊಳ್ಳಿ ಎಂದು ಆತ್ಮಸ್ಥೈರ್ಯ ತುಂಬಿ, ಸ್ಪರ್ಧಾತ್ಮಕ ಜಗತ್ತಿನಲ್ಲಿ ಹೇಗೆ ಸ್ಪರ್ಧಿಸಬೇಕು ಎಂದು ತಿಳಿಸಿ ಸಾಧಕ ವಿದ್ಯಾರ್ಥಿಗಳನ್ನು ಅಭಿನಂದಿಸಿದರು.
ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಶ್ರೀ ಪ್ರಭಾಕರ್ ವಿ. ಮಾನ್ಯ ಅಧ್ಯಕ್ಷರು, ಸಾಮಾಜಿಕ ನ್ಯಾಯ ಸಮಿತಿ ಪುರಸಭೆ ಕುಂದಾಪುರ ಮತ್ತು ಶ್ರೀಮತಿ ಪ್ರಭಾವತಿ ಶೆಟ್ಟಿ ಮಾನ್ಯ ಪುರಸಭಾ ಸದಸ್ಯರು ಕುಂದಾಪುರ ಆಗಮಿಸಿ ನಿಲಯದ ಸೌಲಭ್ಯವನ್ನು ಶ್ಲಾಘಿಸಿ, ಇದನ್ನು ಉಪಯೋಗಿಸಿಕೊಳ್ಳಲು ಮತ್ತು ವಿದ್ಯಾರ್ಥಿಗಳು ಸಮಾಜದ ಮುಖ್ಯ ವಾಹಿನಿಗೆ ತಲುಪಲು ಕರೆ ನೀಡಿದರು. ಮಾನ್ಯ ಜಿಲ್ಲಾ ಅಧಿಕಾರಿಗಳಾದ ಶ್ರೀ ಹಾಕಪ್ಪ ಲಮಾಣಿ ಇವರು ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಾನ್ಯ ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣ ಅಧಿಕಾರಿಗಳಾದ ಶ್ರೀಮತಿ ಆಶಾದೇವಿ ನಾಯಕ್ ವಹಿಸಿ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.
ಕಾರ್ಯಕ್ರಮದಲ್ಲಿ ಎಲ್ಲ ಸಿಬ್ಬಂದಿ ವರ್ಗದವರು ವಿದ್ಯಾರ್ಥಿನಿಯರು ಹಾಜರಿದ್ದರು.ತದನಂತರ ಸಾಂಸ್ಕೃತಿಕ ಕಾರ್ಯಕ್ರಮ ವಿದ್ಯಾರ್ಥಿಗಳಿಂದ ಜರುಗಿತು.
ಕಾರ್ಯಕ್ರಮದಲ್ಲಿ ವಿದ್ಯಾರ್ಥಿ ನಿಲಯದ ನಿಲಯ ಪಾಲಕರಾದ ಶ್ರೀಮತಿ ಆಶಾಲತಾ ಸ್ವಾಗತಿಸಿ ಪ್ರಾಸ್ತಾವಿಕ ನುಡಿಗೈದರು. ವಿದ್ಯಾರ್ಥಿನಿ ರಮ್ಯ ಕಾರ್ಯಕ್ರಮ ನಿರ್ವಹಿಸಿ, ವಂದಿಸಿದರು

ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು