Tuesday, September 8, 2026
ಸುದ್ದಿ

ವೈಭವ್‌ ಸೂರ್ಯವಂಶಿಯನ್ನ ಹಾಡಿ ಹೊಗಳಿದ ಗ್ರ್ಯಾಂಡ್‌ಮಾಸ್ಟರ್ ಪ್ರಜ್ಞಾನಂದ – ಕಹಳೆ ನ್ಯೂಸ್

ನವದೆಹಲಿ: ಭಾರತದ ಯುವ ಚೆಸ್ ಗ್ರ್ಯಾಂಡ್‌ಮಾಸ್ಟರ್ ಪ್ರಜ್ಞಾನಂದ ನಾರ್ವೆ ಚೆಸ್ ಟೂರ್ನಿಯಲ್ಲಿ ಚಾಂಪಿಯನ್ ಆಗಿ ಹೊಸ ಇತಿಹಾಸ ನಿರ್ಮಿಸಿದ್ದಾರೆ. ವಿಶ್ವದ ಪ್ರತಿಷ್ಠಿತ ಚೆಸ್ ಟೂರ್ನಿಗಳಲ್ಲಿ ಒಂದಾದ ಈ ಸ್ಪರ್ಧೆಯಲ್ಲಿ 18 ಅಂಕಗಳೊಂದಿಗೆ ಪ್ರಶಸ್ತಿ ಗೆದ್ದಿರುವ ಪ್ರಜ್ಞಾನಂದ, ವಿಶ್ವ ನಂ.1 ಆಟಗಾರ ಮ್ಯಾಗ್ನಸ್ ಕಾರ್ಲ್ಸನ್ ಅವರನ್ನು ಎರಡು ಬಾರಿ ಮಣಿಸಿ ಗಮನ ಸೆಳೆದಿದ್ದಾರೆ.

ಜಾಹೀರಾತು

ತಮ್ಮ ಸಾಧನೆ ಕುರಿತು ಮಾತನಾಡಿರುವ ಪ್ರಜ್ಞಾನಂದ, ಮ್ಯಾಗ್ನಸ್ ಕಾರ್ಲ್ಸನ್ ಅವರನ್ನು ಸೋಲಿಸುವುದು ಯಾವಾಗಲೂ ವಿಶೇಷ. ಅವರು ಆಡುತ್ತಿರುವ ಟೂರ್ನಿಯನ್ನೇ ಗೆಲ್ಲಬೇಕು ಎಂಬುದು ನನ್ನ ಕನಸಾಗಿತ್ತು. ಈ ಗೆಲುವು ನನಗೆ ದೊಡ್ಡ ಆತ್ಮವಿಶ್ವಾಸ ನೀಡಿದೆ. ನಾರ್ವೆ ಚೆಸ್ ಪ್ರಶಸ್ತಿ ನನ್ನ ವೃತ್ತಿಜೀವನದ ಮಹತ್ವದ ಮೈಲಿಗಲ್ಲು ಎಂದು ಹೇಳಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಟೂರ್ನಿಗಾಗಿ ಯಾವುದೇ ವಿಶೇಷ ತಯಾರಿ ಮಾಡಿರಲಿಲ್ಲ ಎಂದು ಹೇಳಿರುವ ಅವರು, ತಮ್ಮ ಕೋಚ್‌ಗಳು ಮತ್ತು ತಂಡದ ಸದಸ್ಯರು ಎದುರಾಳಿಗಳ ಬಗ್ಗೆ ಸೂಕ್ಷ್ಮವಾಗಿ ಅಧ್ಯಯನ ನಡೆಸಿದ್ದರು ಎಂದು ತಿಳಿಸಿದ್ದಾರೆ.