Monday, June 8, 2026
ಬೆಂಗಳೂರುರಾಜ್ಯಸುದ್ದಿ

ಗ್ರಾಹಕರಿಗೆ ಮತ್ತೊಂದು ಶಾಕ್ – ಪೆಟ್ರೋಲ್, ಗ್ಯಾಸ್ ಬಳಿಕ ಅಕ್ಕಿ ಬೆಲೆ ಗಗನಕ್ಕೆ -ಕಹಳೆ ನ್ಯೂಸ್

ಬೆಂಗಳೂರು: ಪೆಟ್ರೋಲ್, ಡೀಸೆಲ್, ಗ್ಯಾಸ್ ಹಾಗೂ ತರಕಾರಿ ಬೆಲೆ ಏರಿಕೆಯ ನಡುವೆಯೇ ಇದೀಗ ಅಕ್ಕಿ ಬೆಲೆ ಯೂ ಹೆಚ್ಚಳವಾಗಿದೆ.
ವಿವಿಧ ತಳಿಯ ಅಕ್ಕಿ ದರದಲ್ಲಿ ಕೆ.ಜಿಗೆ 10 ರಿಂದ 20 ರೂಪಾಯಿವರೆಗೆ ಏರಿಕೆಯಾಗಿದ್ದು, ಇದರಿಂದ ಗ್ರಾಹಕರ ಜೇಬಿಗೆ ಮತ್ತಷ್ಟು ಹೊರೆ ಬಿದ್ದಂತಾಗಿದೆ.

ಜಾಹೀರಾತು

ಇನ್ನೂ ಹೊಸ ಅಕ್ಕಿ ಬೆಳೆ ನವೆಂಬರ್ ವೇಳೆಗೆ ಮಾರುಕಟ್ಟೆಗೆ ಬರುವ ಸಾಧ್ಯತೆ ಇದೆ. ಅಲ್ಲಿಯವರೆಗೆ ಅಕ್ಕಿ ಕೊರತೆ ಮುಂದುವರಿಯುವ ಸಾಧ್ಯತೆ ಇದ್ದು, ಮುಂದಿನ ದಿನಗಳಲ್ಲಿ ದರ ಮತ್ತಷ್ಟು ಏರಿಕೆಯಾಗುವ ಆತಂಕ ಎದುರಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಪ್ರಸ್ತುತ ಸ್ಟೀಮ್ ರೈಸ್ ಕೆ.ಜಿಗೆ 42 ರೂಪಾಯಿಯಿಂದ 56 ರೂಪಾಯಿಗೆ ಏರಿಕೆಯಾಗಿದೆ. ರಾ ರೈಸ್ 50 ರೂಪಾಯಿಯಿಂದ 62 ರೂಪಾಯಿಗೆ ಹೆಚ್ಚಳವಾಗಿದೆ. ಕೋಲಂ ರೈಸ್ 68 ರೂಪಾಯಿಯಿಂದ 80 ರೂಪಾಯಿಗೆ ಜಿಗಿದರೆ, ಕೋಲಂ ಸ್ಟೀಮ್ ಅಕ್ಕಿ 55 ರೂಪಾಯಿಯಿಂದ 65 ರೂಪಾಯಿಗೆ ಏರಿಕೆಯಾಗಿದೆ. ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಈಗಾಗಲೇ ಸಂಕಷ್ಟದಲ್ಲಿರುವ ಜನರು, ಅಕ್ಕಿ ದರ ಹೆಚ್ಚಳದಿಂದ ಮತ್ತಷ್ಟು ತೊಂದರೆ ಅನುಭವಿಸುವಂತಾಗಿದೆ. ದಿನನಿತ್ಯದ ಖರ್ಚು ನಿಭಾಯಿಸುವುದೇ ಸವಾಲಾಗಿದೆ ಎಂದು ಗ್ರಾಹಕರು ಅಳಲು ತೋಡಿಕೊಂಡಿದ್ದಾರೆ.