Monday, June 8, 2026
ಬೆಂಗಳೂರುರಾಜ್ಯಸುದ್ದಿ

ಬೆಂಗಳೂರು ಏರ್‌ಪೋರ್ಟ್‌ನಲ್ಲಿ 5.87 ಕೋಟಿ ಮೌಲ್ಯದ ಮಾದಕ ವಸ್ತು ಜಪ್ತಿ – ಕಹಳೆ ನ್ಯೂಸ್

ಬೆಂಗಳೂರು: ಇಲ್ಲಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 5.87 ಕೋಟಿ ಮೌಲ್ಯದ ಮಾದಕ ವಸ್ತು ಜಪ್ತಿಯಾಗಿದೆ.

ಜಾಹೀರಾತು

ಬೆಳ್ಳಂಬೆಳಿಗ್ಗೆ ವಿಮಾನ ನಿಲ್ದಾಣದ ಅಧಿಕಾರಿಗಳು ಭರ್ಜರಿ ದಾಳಿ ನಡೆಸಿದ್ದಾರೆ. ಬ್ಯಾಂಕಾಕ್‌ನಿಂದ ಬೆಂಗಳೂರಿಗೆ ಬಂದ ಪ್ರಯಾಣಿಕರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಗಾಂಜಾ ಸಾಗಿಸುತ್ತಿರುವುದು ಬೆಳಕಿಗೆ ಬಂದಿದೆ. ಈ ವೇಳೆ ಒಟ್ಟು 5.87 ಕೋಟಿ ರೂ. ಮೌಲ್ಯದ 16 ಕೆಜಿ 880 ಗ್ರಾಂ ಮಾದಕ ವಸ್ತುವನ್ನು ಜಪ್ತಿ ಮಾಡಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಕೋಟ್ಯಂತರ ರೂ. ಮೌಲ್ಯದ ಹೈಡ್ರೋಫೋನಿಕ್ ಗಾಂಜಾ ವಶಪಡಿಸಿಕೊಂಡಿದ್ದು, ಇಬ್ಬರು ಪ್ರಯಾಣಿಕರ ವಿರುದ್ಧ NDPS ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.