
ಬಳ್ಳಾರಿ: ಕಲ್ಯಾಣ ಕರ್ನಾಟಕ, ಆಂಧ್ರಪ್ರದೇಶ ಹಾಗೂ ತೆಲಂಗಾಣದ ಲಕ್ಷಾಂತರ ರೈತರ ಜೀವನಾಡಿಯಾಗಿರುವ ತುಂಗಭದ್ರಾ ಜಲಾಶಯಕ್ಕೆ ಮುಂಗಾರು ಮಳೆಯ ಆರಂಭದಲ್ಲೇ ಹೊಸ ಕಳೆ ಬಂದಿದೆ. ತೀವ್ರ ಬೇಸಿಗೆಯಿಂದಾಗಿ ಒಣಗಿ ‘ಡೆಡ್ ಸ್ಟೋರೇಜ್’ ತಲುಪಿದ್ದ ಜಲಾಶಯಕ್ಕೆ ಈಗ ಜಲಾನಯನ ಪ್ರದೇಶಗಳಿಂದ ಭಾರೀ ಪ್ರಮಾಣದ ನೀರು ಹರಿದು ಬರುತ್ತಿದೆ.
ತುಂಗಭದ್ರಾ ಜಲಾಶಯದ ಗರಿಷ್ಠ ನೀರಿನ ಸಂಗ್ರಹ ಸಾಮರ್ಥ್ಯ 101 ಟಿಎಂಸಿ ಆಗಿದ್ದು ಸದ್ಯ ಜಲಾಶಯದಲ್ಲಿ 10 ಟಿಎಂಸಿ ನೀರು ಸಂಗ್ರಹವಾಗಿದೆ. ಮುಂಗಾರು ಮಳೆಯ ಅಬ್ಬರ ಹೀಗೆಯೇ ಮುಂದುವರಿದರೆ, ಈ ವರ್ಷ ನಿಗದಿತ ಅವಧಿಗಿಂತ ಮುನ್ನವೇ ಜಲಾಶಯ ಸಂಪೂರ್ಣವಾಗಿ ಭರ್ತಿಯಾಗುವ ಸಾಧ್ಯತೆ ದಟ್ಟವಾಗಿದೆ.











