Wednesday, June 10, 2026
ಸುದ್ದಿ

ಅಫ್ಘಾನ್ ಮೇಲೆ ಪಾಕ್ ಬಾಂಬ್ ದಾಳಿ : 11 ಮಕ್ಕಳು ಸೇರಿ 13 ಮಂದಿ ಸಾವು -ಕಹಳೆ ನ್ಯೂಸ್

ಕಾಬೂಲ್: ಅಫ್ಘಾನಿಸ್ತಾನದ ಗಡಿಯಲ್ಲಿ ಪಾಕಿಸ್ತಾನ ಸೇನೆ ಮತ್ತೆ ಬಾಂಬ್ ದಾಳಿ ನಡೆಸಿದೆ ಎಂದು ಅಫ್ಘಾನಿಸ್ತಾನದ ತಾಲಿಬಾನ್ (Taliban) ಸರ್ಕಾರ ಗಂಭೀರ ಆರೋಪ ಮಾಡಿದೆ. ಈ ಭೀಕರ ದಾಳಿಯಲ್ಲಿ ಕನಿಷ್ಠ 13 ಜನ ಸಾವನ್ನಪ್ಪಿದ್ದು, 14 ಜನ ತೀವ್ರ ಗಾಯಗೊಂಡಿದ್ದಾರೆ. ಮೃತಪಟ್ಟವರಲ್ಲಿ ಹೆಚ್ಚಿನವರು ಮಕ್ಕಳು ಎನ್ನಲಾಗಿದೆ. ಇದರಿಂದಾಗಿ ಉಭಯ ದೇಶಗಳ ನಡುವಿನ ಗಡಿ ಸಂಘರ್ಷ ತಾರಕಕ್ಕೇರಿದೆ.
ತಾಲಿಬಾನ್ ಸರ್ಕಾರದ ವಕ್ತಾರ ಜಬೀಹುಲ್ಲಾ ಮುಜಾಹಿದ್ ಈ ಬಗ್ಗೆ ತಮ್ಮ ಅಧಿಕೃತ ಎಕ್ಸ್ ಖಾತೆಯಲ್ಲಿ ಪೋಸ್ಟ್ ಹಂಚಿಕೊAಡಿದ್ದು, ಪಾಕಿಸ್ತಾನ ಮತ್ತೊಮ್ಮೆ ಅಫ್ಘಾನಿಸ್ತಾನದ ವಾಯುಗಡಿಯನ್ನು ಉಲ್ಲಂಘಿಸಿ, ಕುನಾರ್, ಖೋಸ್ಟ್ ಮತ್ತು ಪಕ್ತಿಕಾ ಪ್ರಾಂತ್ಯಗಳಲ್ಲಿದ್ದ ಸಾಮಾನ್ಯ ನಾಗರಿಕರ ಮನೆಗಳ ಮೇಲೆ ಬಾಂಬ್ ದಾಳಿ ನಡೆಸಿದೆ. ಇದೊಂದು ಅಮಾನವೀಯ ಕೃತ್ಯ ಮತ್ತು ಆಕ್ರಮಣಕಾರಿ ನಡವಳಿಕೆಯಾಗಿದ್ದು, ಇದನ್ನು ನಾವು ತೀವ್ರವಾಗಿ ಖಂಡಿಸುತ್ತೇವೆ. ಈ ದಾಳಿಯಲ್ಲಿ 11 ಮಕ್ಕಳು, ಒಬ್ಬ ಮಹಿಳೆ ಹಾಗೂ ಓರ್ವ ವೃದ್ಧ ಸಾವನ್ನಪ್ಪಿದ್ದು, ಗಾಯಗೊಂಡ 14 ಜನರಲ್ಲಿ ಮಹಿಳೆಯರು ಮತ್ತು ಮಕ್ಕಳೂ ಸೇರಿದ್ದಾರೆ ಎಂದು ತಿಳಿಸಿದ್ದಾರೆ.

ಜಾಹೀರಾತು

ಈ ಬಗ್ಗೆ ಪಾಕಿಸ್ತಾನದ ಸರ್ಕಾರವಾಗಲಿ ಅಥವಾ ಅಲ್ಲಿನ ಸೇನೆಯಾಗಲಿ ಯಾವುದೇ ಅಧಿಕೃತ ಪ್ರತಿಕ್ರಿಯೆ ನೀಡಿಲ್ಲ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಈ ನಡುವೆ ಭಾರತವು ಪಾಕಿಸ್ತಾನದ ಈ ನಡವಳಿಕೆಯನ್ನು ತೀವ್ರವಾಗಿ ಖಂಡಿಸಿದ್ದು, ಪಾಕಿಸ್ತಾನವು ಇಷ್ಟೊಂದು ದೊಡ್ಡ ಹತ್ಯಾಕಾಂಡವನ್ನು ಕೇವಲ ಒಂದು ಮಿಲಿಟರಿ ಕಾರ್ಯಾಚರಣೆ ಎಂಬಖಂತೆ ಬಿಂಬಿಸಲು ಪ್ರಯತ್ನಿಸುತ್ತಿದೆ ಎಂದು ಟೀಕಿಸಿದೆ.

ಇತ್ತೀಚಿನ ದಿನಗಳಲ್ಲಿ ಈ ಪ್ರದೇಶದಲ್ಲಿ ಭಾರಿ ಉದ್ವಿಗ್ನತೆ ಸೃಷ್ಟಿಯಾಗುತ್ತಿದೆ. ಮಧ್ಯಪ್ರಾಚ್ಯದಲ್ಲಿ ಅಮೆರಿಕ ಹಾಗೂ ಇರಾನ್ ನಡುವೆ ಸಂಘರ್ಷ ನಡೆಯುತ್ತಿದೆ. ಇತ್ತ ಪಾಕ್ ಆಕ್ರಮಿತ ಕಾಶ್ಮೀರದಲ್ಲೂ ಹಿಂಸಾಚಾರ ಶುರುವಾಗಿದೆ. ಫೆಬ್ರವರಿ ಕೊನೆಯ ವಾರದಲ್ಲಿ ಪಾಕಿಸ್ತಾನದ ದಾಳಿಗೆ ಅಫ್ಘಾನಿಸ್ತಾನ ಪ್ರತಿದಾಳಿ ನಡೆಸಿ ತಿರುಗೇಟು ನೀಡಿತ್ತು. ಅಂದಿನಿಂದ ಆರಂಭವಾದ ಈ ಗಡಿ ಸಂಘರ್ಷದಲ್ಲಿ ಇದುವರೆಗೆ ನೂರಾರು ಜನ ಜೀವ ಕಳೆದುಕೊಂಡಿದ್ದಾರೆ. ಈ ಮಧ್ಯೆ ತಾತ್ಕಲಿಕವಾಗಿ ಕದನ ವಿರಾಮದ ಒಪ್ಪಂದಗಳು ನಡೆದರೂ ಕೂಡ ಉಭಯ ದೇಶಗಳ ನಡುವೆ ಶಾಂತಿ ಕಾಪಾಡಲು ಸಾಧ್ಯವಾಗಿಲ್ಲ.

ಅಫ್ಘಾನಿಸ್ತಾನ ತೆಹ್ರಿಕ್-ಎ-ತಾಲಿಬಾನ್ (ಟಿಟಿಪಿ) ಉಗ್ರಗಾಮಿಗಳಿಗೆ ಆಶ್ರಯ ನೀಡುತ್ತಿದೆ ಎಂದು ಇಸ್ಲಾಮಾಬಾದ್ ನಿರಂತರವಾಗಿ ಆರೋಪಿಸುತ್ತಿದೆ. ಈ ಸಂಘಟನೆ ಅಫ್ಘಾನಿಸ್ತಾನವನ್ನು ಆಳುತ್ತಿರುವ ತಾಲಿಬಾನ್‌ಗಿಂತಲೂ ಭಿನ್ನವಾಗಿದ್ದರೂ ಅದರೊಂದಿಗೆ ನಿಕಟ ಸಂಪರ್ಕ ಹೊಂದಿದೆ ಎನ್ನಲಾಗಿದೆ. ಆದರೆ ತನ್ನ ನೆಲದಲ್ಲಿ ಯಾವುದೇ ಉಗ್ರರಿಗೆ ಆಶ್ರಯ ನೀಡಿಲ್ಲ ಎಂದು ಅಫ್ಘಾನ್ ಈ ಆರೋಪವನ್ನ ಸಂರ್ಪೂವಾಗಿ ತಳ್ಳಿ ಹಾಕಿದೆ.