Wednesday, July 29, 2026
ಬೆಂಗಳೂರುರಾಜ್ಯಸುದ್ದಿ

ಕಾಂಟ್ರಾಕ್ಟರ್ ಮನೆಯಲ್ಲಿ ಕಳ್ಳ ದಂಪತಿ ಕೈಚಳಕ : 25 ಲಕ್ಷ ಹಣ ಕದ್ದು ಎಸ್ಕೇಪ್ ಆಗುತ್ತಿದ್ದ ವೇಳೆ ಅರೆಸ್ಟ್- ಕಹಳೆ ನ್ಯೂಸ್

ಬೆಂಗಳೂರು: ಕೆಲಸಗಾರರಿಗೆ ಸಂಬಳ ನೀಡಲು ಮನೆಯಲ್ಲಿ ಇಟ್ಟಿದ್ದ 25 ಲಕ್ಷ ರೂಪಾಯಿ ನಗದು ಕಳ್ಳತನ ಮಾಡಿ ನೇಪಾಳಕ್ಕೆ ಎಸ್ಕೇಪ್ ಆಗಲು ಯತ್ನಿಸಿದ್ದ ನೇಪಾಳಿ ಮೂಲದ ದಂಪತಿಯನ್ನು ಅಮೃತಹಳ್ಳಿ ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳಿಂದ 25 ಲಕ್ಷ ರೂಪಾಯಿ ನಗದನ್ನು ವಶಕ್ಕೆ ಪಡೆಯಲಾಗಿದೆ.
ನೇಪಾಳ ಮೂಲದ ಪವನ್ ಬಿಸ್ತಾ ಹಾಗೂ ಸೀತಾ ಬಿಸ್ತಾ ಬಂಧಿತ ಆರೋಪಿಗಳು. ಅಮೃತಹಳ್ಳಿಯ ಕಾಂಟ್ರಾಕ್ಟರ್ ಒಬ್ಬರ ಮನೆಯಲ್ಲಿ ಮನೆ ಕೆಲಸಕ್ಕೆ ಸೇರಿದ್ದ ದಂಪತಿ, ಕೇವಲ ಒಂದು ತಿಂಗಳಲ್ಲೇ ಮನೆಯ ಮಾಲೀಕರು ಹಣ ಎಲ್ಲಿ ಇಡುತ್ತಾರೆ ಎಂಬ ಮಾಹಿತಿ ಕಲೆ ಹಾಕಿದ್ದರು. ಕಳ್ಳತನ ಮಾಡುವ ಉದ್ದೇಶದಿಂದಲೇ ಕಡಿಮೆ ಸಂಬಳಕ್ಕೆ ಕೆಲಸಕ್ಕೆ ಸೇರಿದ್ದರು ಎಂದು ತನಿಖೆಯಲ್ಲಿ ತಿಳಿದುಬಂದಿದೆ.

ಉದ್ಯಮಿ ತಮ್ಮ ಕೆಲಸಗಾರರಿಗೆ ಸಂಬಳ ನೀಡಲು ಬ್ಯಾಂಕ್‌ನಿಂದ 25 ಲಕ್ಷ ರೂಪಾಯಿ ಡ್ರಾ ಮಾಡಿ ಮನೆಯ ಕಬೋರ್ಡ್‌ನಲ್ಲಿ ಇಟ್ಟಿದ್ದರು. ಕಬೋರ್ಡ್‌ನ ಕೀಲಿಯನ್ನು ಮತ್ತೊಂದು ಕಬೋರ್ಡ್‌ನಲ್ಲಿ ಇಟ್ಟಿರುವ ವಿಚಾರವೂ ಆರೋಪಿಗಳಿಗೆ ಗೊತ್ತಾಗಿತ್ತು. ಮನೆಯ ಮಾಲೀಕರು ಇಲ್ಲದ ಸಮಯದಲ್ಲಿ ಕಬೋರ್ಡ್ ತೆರೆದು 25 ಲಕ್ಷ ರೂಪಾಯಿ ನಗದು ಇದ್ದ ಬ್ಯಾಗ್ ಸಮೇತ ದಂಪತಿ ಪರಾರಿಯಾಗಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು