Friday, June 12, 2026
ಜಿಲ್ಲೆದಕ್ಷಿಣ ಕನ್ನಡಪುತ್ತೂರುಶಿಕ್ಷಣಸುದ್ದಿ

ಜೂ.13ರಂದು ಕಾರ್ಗಿಲ್ ಹುಲಿ, ಸೇನಾ ಪದಕ ವಿಜೇತ ಕ್ಯಾ. ನವೀನ್ ನಾಗಪ್ಪ ಅಂಬಿಕಾಕ್ಕೆ ಭೇಟಿ -ಹಳೆ ನ್ಯೂಸ್

ಪುತ್ತೂರು: ಕಾರ್ಗಿಲ್ ಹೋರಾಟದಲ್ಲಿ ಅಪ್ರತಿಮ ಶೌರ್ಯಪ್ರದರ್ಶಿಸಿ ಪಾಕಿಸ್ಥಾನದ ಸೈನಿಕರನ್ನು ಹಿಮ್ಮೆಟ್ಟಿಸುವಲ್ಲಿ ತನ್ನದಾದ ಕೊಡುಗೆ ನೀಡಿರುವ, ಸೇನಾ ಪದಕ ವಿಜೇತ ಕ್ಯಾಪ್ಟನ್ ನವೀನ್ ನಾಗಪ್ಪ ಜೂನ್13 ರಂದು ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಪ್ರವರ್ತಿತ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳಿಗೆ ಭೇಟಿ ನೀಡಲಿದ್ದಾರೆ.
ಬಪ್ಪಳಿಗೆ ಹಾಗೂ ನೆಲ್ಲಿಕಟ್ಟೆಯ ಅಂಬಿಕಾ ಪದವಿಪೂರ್ವ ವಿದ್ಯಾಲಯಗಳು ಹಾಗೂ ಅಂಬಿಕಾ ವಿದ್ಯಾಲಯ ಸಿಬಿಎಸ್‌ಇ ಸಂಸ್ಥೆಯ ವಿದ್ಯಾರ್ಥಿ ಸಂಘದ ಪದಗ್ರಹಣವನ್ನು ಅವರು ಬಪ್ಪಳಿಗೆಯ ಶ್ರೀ ಶಂಕರ ಸಭಾಭವನದಲ್ಲಿ ಬೆಳಗ್ಗೆ 11 ಗಂಟೆಗೆ ನೆರವೇರಿಸಿಕೊಡಲಿದ್ದಾರೆ. ಹಾಗೂ ಸಶಸ್ತ್ರ ಪಡೆಗಳ ಬಣ್ಣದ ವಿದ್ಯಾರ್ಥಿ ಸಮವಸ್ತ್ರವನ್ನು ಅನಾವರಣಗೊಳಿಸಲಿದ್ದಾರೆ.

ಜಾಹೀರಾತು

ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಬ್ರಮಣ್ಯ ನಟ್ಟೋಜ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.
ಕಾರ್ಯದರ್ಶಿ ರಾಜಶ್ರೀ ಎಸ್.ನಟ್ಟೋಜ, ಬಪ್ಪಳಿಗೆ ಅಂಬಿಕಾ ವಿದ್ಯಾಲಯ ಸಿಬಿಎಸ್‌ಇ ಸಂಸ್ಥೆಯ ಪ್ರಾಂಶುಪಾಲೆ ಮಾಲತಿ ಡಿ., ಅಂಬಿಕಾ ಪದವಿಪೂರ್ವ ವಿದ್ಯಾಲಯದ ಪ್ರಾಚಾರ್ಯ ಗಣೇಶ್ ಪ್ರಸಾದ್ ಡಿ.ಎಸ್, ನೆಲ್ಲಿಕಟ್ಟೆ ಅಂಬಿಕಾ ಪದವಿಪೂರ್ವ ವಿದ್ಯಾಲಯದ ಪ್ರಾಚಾರ್ಯ ಸತ್ಯಜಿತ್ ಉಪಾಧ್ಯಾಯ ಉಪಸ್ಥಿತರಿರುವರು ಎಂದು ಪ್ರಕಟಣೆ ತಿಳಿಸಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು