Saturday, June 13, 2026
ಜಿಲ್ಲೆದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಮಂಜುನಾಥನ ಭಕ್ತರಿಗೆ ಗುಡ್ ನ್ಯೂಸ್ : ಇಂದಿನಿಂದ ಧರ್ಮಸ್ಥಳಕ್ಕೆ ಹೊಸ ಪ್ಯಾಕೇಜ್ ಪರಿಚಯಿಸಿದ KSTDC- ಕಹಳೆ ನ್ಯೂಸ್

ಬೆಂಗಳೂರು: ಕರ್ನಾಟಕದಲ್ಲಿ ಅತೀ ಹೆಚ್ಚು ಶಿವ ಭಕ್ತರು ಭೇಟಿ ನೀಡುವ ದೇವಾಲಯ ಅಂದರೆ ಅದು ಧರ್ಮಸ್ಥಳ. ಬೆಂಗಳೂರು ಸೇರಿದಂತೆ ಪ್ರತಿನಿತ್ಯ ಸಾವಿರಾರು ಭಕ್ತರು ಧರ್ಮಸ್ಥಳ  ಮಂಜುನಾಥನ ದರ್ಶನಕ್ಕಾಗಿ ಹೋಗುತ್ತಾರೆ. ಜೊತೆಗೆ ಅಲ್ಲಿ ಗಂಟೆಗಟ್ಟಲೆ ಕ್ಯೂನಲ್ಲಿ ನಿಂತು ದರ್ಶನ ಮಾಡಿಕೊಂಡು ಬರುತ್ತಾರೆ. ಇದೀಗ ರಾಜಧಾನಿಯಿಂದ ಧರ್ಮಸ್ಥಳಕ್ಕೆ ತೆರಳುವ ಭಕ್ತಾದಿಗಳಿಗೆ ಕೆಎಸ್‌ಟಿಡಿಸಿ ಗುಡ್ ನ್ಯೂಸ್ ನೀಡಿದೆ. ಇನ್ಮುಂದೆ ರಾಜಧಾನಿಗರು ಶೀಘ್ರದಲ್ಲೇ ಮಂಜುನಾಥನ ದರ್ಶನ ಮಾಡಬಹುದಾಗಿದೆ.

ಜಾಹೀರಾತು
ಶ್ರೀ ಕ್ಷೇತ್ರ ಧರ್ಮಸ್ಥಳ ಕೇವಲ ಧಾರ್ಮಿಕ ಸ್ಥಳ ಮಾತ್ರವಲ್ಲ, ಅದೊಂದು ಶಕ್ತಿ, ರಾಜ್ಯದ ಕೋಟ್ಯಂತರ ಭಕ್ತರ ನಂಬಿಕೆ. ಈ ಧರ್ಮಕ್ಷೇತ್ರಕ್ಕೆ ಪ್ರತಿನಿತ್ಯ ಸಹಸ್ರ ಸಹಸ್ರ ಸಂಖ್ಯೆಯಲ್ಲಿ ಭಕ್ತಾದಿಗಳು ಆಗಮಿಸತ್ತಾರೆ. ಅದರಂತೆ ಬೆಂಗಳೂರಲ್ಲೂ ಮಂಜುನಾಥನ ಭಕ್ತಗಣ ದೊಡ್ಡದಿದ್ದು, ರಾಜಧಾನಿಯಿಂದ ಧರ್ಮಸ್ಥಳ, ಕುಕ್ಕೆ, ಸೌತಡ್ಕಕ್ಕೆ ಭೇಟಿ ನೀಡುವ ಭಕ್ತರಿಗೆ ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮ ಅಥವಾ ಕೆಎಸ್‌ಟಿಡಿಸಿ ಸಿಹಿ ಸುದ್ದಿ ನೀಡಿದೆ. ಇಂದಿನಿಂದ ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳ, ಕುಕ್ಕೆ ಸುಬ್ರಹ್ಮಣ್ಯ, ಸೌತಡ್ಕಕಕ್ಕೆ ಟೂರ್ ಪ್ಯಾಕೇಜ್ ಆರಂಭಿಸುತ್ತಿದೆ. ಮೊದಲ ಹಂತದಲ್ಲಿ ಟ್ರಯಲ್ ಆಗಿ ವಾರದಲ್ಲಿ ಒಮ್ಮೆ ಈ ಟೂರ್ ಪ್ಯಾಕೇಜ್ ಆರಂಭಿಸುತ್ತಿದ್ದು, ಇಂದಿನಿಂದ ಪ್ರಾರಂಭವಾಗುತ್ತಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು