Recent Posts

Saturday, September 12, 2026
ಬೆಂಗಳೂರುರಾಜ್ಯಸುದ್ದಿ

ಬೆಂಗಳೂರು – ಚೆನ್ನೈ ಎಕ್ಸ್‌ಪ್ರೆಸ್‌ ವೇಯಲ್ಲಿ ಡಿವೈಡರ್‌ಗೆ ಕಾರು ಡಿಕ್ಕಿ; ಯುವತಿ ದುರ್ಮರಣ- ಕಹಳೆ ನ್ಯೂಸ್

ಬೆಂಗಳೂರು: ಡಿವೈಡರ್‌ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಯುವತಿ ಸಾವನ್ನಪ್ಪಿರುವ ಘಟನೆ ಬೆಂಗಳೂರು- ಚೆನ್ನೈ ಎಕ್ಸ್‌ಪ್ರೆಸ್‌ ವೇಯಲ್ಲಿ  ನಡೆದಿದೆ. ಹೊಸಕೋಟೆ ಸಮೀಪದ ದೊಡ್ಡ ಹುಲ್ಲೂರು ಬಳಿ ಅಪಘಾತ ಸಂಭವಿಸಿದೆ. ಅಪಘಾತದ ತೀವ್ರತೆಗೆ ಬೆಂಜ್ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು, ಯುವತಿ ಸ್ಥಳದಲ್ಲೇ ಮೃತಪಟ್ಟಿದ್ದಾಳೆ. ಕಾರು ಚಾಲಕನ ನಿರ್ಲಕ್ಷ್ಯ ಹಾಗೂ ಬೇಜವಾಬ್ದಾರಿ ಚಾಲನೆಯೇ ಅಪಘಾತಕ್ಕೆ ಕಾರಣವಾಗಿರಬಹುದು ಎಂದು ಶಂಕಿಸಲಾಗಿದೆ.

ಜಾಹೀರಾತು

ಅಪಘಾತದ ಬಳಿಕ ಕಾರು ಚಾಲಕ ಸ್ಥಳದಿಂದ ಪರಾರಿಯಾಗಿದ್ದು, ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ. ಈ ಘಟನೆ ಹಲವು ಅನುಮಾನಗಳಿಗೆ ಕಾರಣವಾಗಿದ್ದು, ಅಪಘಾತದ ನಿಖರ ಕಾರಣ ಇನ್ನಷ್ಟೇ ತಿಳಿಯಬೇಕಿದೆ. ಘಟನಾ ಸ್ಥಳಕ್ಕೆ ಹೊಸಕೋಟೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನೆ ಸಂಬಂಧ ಹೊಸಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು