
ಉಡುಪಿ: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಉಡುಪಿ ಜಿಲ್ಲೆಯ ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಭೇಟಿ ನೀಡಿ ಶ್ರೀ ದೇವಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು.
ದೇವಳದ ಪ್ರಧಾನ ಅರ್ಚಕ ವೇದಮೂರ್ತಿ ಶ್ರೀನಿವಾಸ ತಂತ್ರಿ ಕಲ್ಯ ಅವರು ದೇವಿಗೆ ವಿಶೇಷ ಪೂಜೆ ಮಾಡಿದರು. ದೇವಳದ ಪ್ರಧಾನ ತಂತ್ರಿ ವಿದ್ವಾನ್ ಕೆ.ಪಿ. ಕುಮಾರ ಗುರು ತಂತ್ರಿ ಕೊರಂಗ್ರಪಾಡಿ ಅವರು ದೇವಿಯ ಬಳಿ ಪ್ರಾರ್ಥಿಸಿ ಪ್ರಸಾದ ವಿತರಿಸಿದರು.
ಉಡುಪಿಯಲ್ಲಿ ನಡೆಯಲಿರುವ ಬಿಜೆಪಿ ಜಿಲ್ಲಾ ಪ್ರಶಿಕ್ಷಣ ವರ್ಗದಲ್ಲಿ ಭಾಗಿಯಾಗಲು ಬಂದಿದ್ದ ಸಂದರ್ಭದಲ್ಲಿ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಕಾಪು ಹೊಸ ಮಾರಿಗುಡಿ ದೇವಳಕ್ಕೆ ಭೇಟಿ ನೀಡಿದರು.
ಈ ಸಂದರ್ಭದಲ್ಲಿ ದೇವಸ್ಥಾನದ ಅಭಿವೃದ್ಧಿ ಸಮಿತಿಯ ಅಧ್ಯಕ್ಷ ಕೆ. ವಾಸುದೇವ ಶೆಟ್ಟಿ ಅವರು ಮಾಧ್ಯಮ ಪ್ರತಿನಿಧಿ ಜತೆ ಮಾತನಾಡಿ ಕಾರ್ಯಕ್ರಮ ನಿಮಿತ್ತ ಉಡುಪಿಗೆ ಬಂದಿದ್ದ ಸಚಿವೆ ನಿರ್ಮಲಾ ಸೀತಾರಾಮ್ ಅವರನ್ನು ತಮ್ಮ ದೇವಸ್ಥಾನಕ್ಕೆ ಬರುವಂತೆ ವಿನಂತಿಸಿಕೊಂಡಿದ್ದೆವು. ಆ ಪ್ರಕಾರ ಅವರು ಕ್ಷೇತ್ರಕ್ಕೆ ಆಗಮಿಸಿ ದೇವಿಗೆ ವಿಶೇಷ ಪೂಜೆ ಸಲ್ಲಿಸಿ ಪ್ರಾರ್ಥಿಸಿ ಹೋಗಿದ್ದಾರೆ. ಮತ್ತೊಮ್ಮೆ ಬರುವುದಾಗಿ ಭರವಸೆ ನೀಡಿದ್ದಾರೆ ಎಂದರು.











