Saturday, June 13, 2026
ಉಡುಪಿಜಿಲ್ಲೆಸುದ್ದಿ

ಉಡುಪಿ ಶ್ರೀಕೃಷ್ಣ, ಉಚ್ಚಿಲ ಶ್ರೀ ಮಹಾಲಕ್ಷ್ಮಿ ದರ್ಶನ ಪಡೆದ ನಿರ್ಮಲಾ ಸೀತಾರಾಮನ್ -ಕಹಳೆ ನ್ಯೂಸ್

ಉಡುಪಿ: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಉಡುಪಿ ಜಿಲ್ಲೆಯ ಪ್ರಮುಖ ಧಾರ್ಮಿಕ ಕ್ಷೇತ್ರಗಳಿಗೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ಉಡುಪಿ ಶ್ರೀಕೃಷ್ಣ ಮಠ  ಕಾಪು ಹೊಸ ಮಾರಿಗುಡಿ ಹಾಗೂ ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನಗಳಲ್ಲಿ  ದೇವರ ದರ್ಶನ ಪಡೆದು ಆಶೀರ್ವಾದ ಪಡೆದರು.

ಜಾಹೀರಾತು

ಉಡುಪಿ ಶ್ರೀಕೃಷ್ಣ ಮಠದಲ್ಲಿ ಕಡಗೋಲು ಕೃಷ್ಣನ ದರ್ಶನ ಕೈಗೊಂಡ ಸಚಿವೆ, ಶ್ರೀ ಅನಂತೇಶ್ವರ ಹಾಗೂ ಶ್ರೀ ಚಂದ್ರಮೌಳೀಶ್ವರ ದೇವಸ್ಥಾನಗಳಿಗೂ ಭೇಟಿ ನೀಡಿದರು. ಈ ವೇಳೆ ಪರ್ಯಾಯ ಶಿರೂರು ಮಠದ ಶ್ರೀ ವೇದವರ್ಧನ ತೀರ್ಥರಿಂದ ಗೌರವಾರ್ಪಣೆ ಮತ್ತು ಆಶೀರ್ವಾದ ಸ್ವೀಕರಿಸಿದರು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಿಲ್ಲೆಯ ವಿವಿಧ ದೇವಾಲಯಗಳಲ್ಲಿ ಧಾರ್ಮಿಕ ವಿಧಿವಿಧಾನಗಳಲ್ಲಿ ಭಾಗಿಯಾದ ಸಚಿವೆ, ದೇವಸ್ಥಾನ ಆಡಳಿತ ಮಂಡಳಿ ಸದಸ್ಯರು ಹಾಗೂ ಬಿಜೆಪಿ ಮುಖಂಡರೊಂದಿಗೆ ಮಾತುಕತೆ ನಡೆಸಿದರು. ಬಿಜೆಪಿ ಜಿಲ್ಲಾ ಪ್ರಶಿಕ್ಷಣ ವರ್ಗದಲ್ಲಿ ಭಾಗವಹಿಸುವ ಮುನ್ನ ಧಾರ್ಮಿಕ ಕ್ಷೇತ್ರಗಳಿಗೆ ಭೇಟಿ ನೀಡಿದ ನಿರ್ಮಲಾ ಸೀತಾರಾಮನ್ ಅವರ ಆಧ್ಯಾತ್ಮಿಕ ಪಯಣ ಗಮನ ಸೆಳೆಯಿತು.