Saturday, June 13, 2026
ಸುದ್ದಿ

ಅಸ್ಸಾಂನ ಜೋರ್ಹತ್ ವಾಯುನೆಲೆಯಲ್ಲಿ AN-32 ವಿಮಾನ ಪತನ; ಐವರು IAF ಸಿಬ್ಬಂದಿ ಹುತಾತ್ಮ -ಕಹಳೆ ನ್ಯೂಸ್

ದಿಸ್ಪುರ: ಅಸ್ಸಾಂನ ಜೋರ್ಹತ್‌ನಲ್ಲಿರುವ ವಾಯುಪಡೆ ನಿಲ್ದಾಣದಲ್ಲಿ ಶನಿವಾರ ಭಾರತೀಯ ವಾಯುಪಡೆಯ (ಐಎಎಫ್) ಎಎನ್ -32 ಸಾರಿಗೆ ವಿಮಾನ ಪತನವಾಗಿದ್ದು ಐವರು ವಾಯುಪಡೆ ಸಿಬ್ಬಂದಿ ಹುತಾತ್ಮರಾಗಿದ್ದಾರೆ. ಸಹ ಪೈಲಟ್‌ ಗಾಯಗೊಂಡಿದ್ದಾರೆ.

ಜಾಹೀರಾತು

ಸ್ಕ್ವಾಡ್ರನ್ ಲೀಡರ್ ಪ್ರಶಾಂತ್ ಸಿಂಗ್, ಫ್ಲೈಟ್ ಲೆಫ್ಟಿನೆಂಟ್ ಶುಭಮ್ ಕುಮಾರ್, ಸಾರ್ಜೆಂಟ್ ಜಿತೇಂದ್ರ ಶರ್ಮಾ, ಅಗ್ನಿವೀರ್ವಾಯು ಖೇಮರಾಮ್ ಕುಮಾವತ್ ಮತ್ತು ಅಗ್ನಿವೀರ್ವಾಯು ಡ್ಯಾನಿಶ್ ಆಲಂ ಮೃತರು ಎಂದು ಗುರುತಿಸಲಾಗಿದೆ. ಭಾರತೀಯ ವಾಯುಪಡೆ ಮೃತರಿಗೆ ಎಕ್ಸ್‌ ಪೋಸ್ಟ್‌ನಲ್ಲಿ ಸಂತಾಪ ಸೂಚಿಸಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು