Monday, June 15, 2026
ಜಿಲ್ಲೆದಕ್ಷಿಣ ಕನ್ನಡಪುತ್ತೂರುಶಿಕ್ಷಣಸುದ್ದಿ

ಪುತ್ತೂರಿನ ನರೇಂದ್ರ ಪದವಿ ಪೂರ್ವ ಕಾಲೇಜಿನಲ್ಲಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ನ ಕಾಲೇಜು ಘಟಕದ ಉದ್ಘಾಟನೆ – ಕಹಳೆ ನ್ಯೂಸ್

ಪುತ್ತೂರಿನ ನರೇಂದ್ರ ಪದವಿ ಪೂರ್ವ ಕಾಲೇಜಿನಲ್ಲಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ನ ಕಾಲೇಜು ಘಟಕದ ಉದ್ಘಾಟನೆಯು   ಕಾಲೇಜಿನ ಹಂಸಧ್ವನಿ ಸಭಾಂಗಣದಲ್ಲಿ ನಡೆಯಿತು.

ಜಾಹೀರಾತು

2026-27 ನೇ ಸಾಲಿನ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಕರ್ನಾಟಕ ರಾಜ್ಯದ ಮೊದಲ ಘಟಕ ಇದಾಗಿದ್ದು ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀ ಪ್ರಸಾದ್ ಶಾನಭಾಗ್, ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಪುತ್ತೂರು ನಗರ ಅಧ್ಯಕ್ಷರು ಹಾಗೂ ಪ್ರಾಂಶುಪಾಲರು ನರೇಂದ್ರ ಪದವಿಪೂರ್ವ ಕಾಲೇಜು ಇವರು ವಹಿಸಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಶ್ರೀ ಚಂದ್ರಶೇಖರ ಮರಾಠಿ, ವಿಭಾಗ ಸಂಘಟನಾ ಕಾರ್ಯದರ್ಶಿಗಳು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಮಂಗಳೂರು ವಿಭಾಗ ಇವರು ಮುಖ್ಯ ಅತಿಥಿಗಳಾಗಿದ್ದರು ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು “ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ವಿಶ್ವದ ಅತಿದೊಡ್ಡ ವಿದ್ಯಾರ್ಥಿ ಸಂಘಟನೆಯಾಗಿದ್ದು ‘ವ್ಯಕ್ತಿ ನಿರ್ಮಾಣದಿಂದ ರಾಷ್ಟ್ರದ ಪುನರ್ ನಿರ್ಮಾಣ’ ಎಂಬ ಧ್ಯೇಯದೊಂದಿಗೆ ವಿದ್ಯಾರ್ಥಿಗಳ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸುತ್ತಿದೆ ಜೊತೆಗೆ ಭಾರತೀಯ ಸಂಸ್ಕೃತಿಯನ್ನು ಮತ್ತು ದೇಶಪ್ರೇಮವನ್ನು ವಿದ್ಯಾರ್ಥಿಗಳಲ್ಲಿ ಬೆಳೆಸುತ್ತದೆ” ಎಂದು ಹೇಳಿದರು.

ಕಾರ್ಯಕ್ರಮದ ವೇದಿಕೆಯಲ್ಲಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಪುತ್ತೂರು ಜಿಲ್ಲಾ ಪ್ರಮುಖರಾದ ಶ್ರೀ ಸುಬ್ರಮಣ್ಯ, ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಪುತ್ತೂರು ಜಿಲ್ಲಾ ಸಂಚಾಲಕರಾದ ಶ್ರೀ ಸಮನ್ವಿತ್ ಕೆ, ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಪುತ್ತೂರು ನಗರ ಕಾರ್ಯದರ್ಶಿಗಳಾದ ಶ್ರೀ ಚರಣ್ ರಾಜ್ ಇವರು ಉಪಸ್ಥಿತರಿದ್ದರು.
2026-27 ನೇ ನೂತನ ಘಟಕದ ಅಧ್ಯಕ್ಷರಾಗಿ ಶ್ರೀ ಪ್ರಖ್ಯಾತ್ ರೈ, ಕಾರ್ಯದರ್ಶಿಗಳಾಗಿ ಶ್ರೀ ಕಿರಣ್ ಆರ್, ಸಹ ಕಾರ್ಯದರ್ಶಿಗಳಾಗಿ ಜೀವಿತಾ ಇವರು ಆಯ್ಕೆಯಾದರು.