Sunday, September 6, 2026
ಚಿಕ್ಕಮಂಗಳೂರುಜಿಲ್ಲೆಸುದ್ದಿ

ನಡು ರಸ್ತೆಯಲ್ಲಿ ತಲ್ವಾರ್‌ನಿಂದ ಬೃಹತ್ ಕೇಕ್‌ ಕತ್ತರಿಸಿ ಬರ್ತಡೇ ಸೆಲೆಬ್ರೇಷನ್‌ : ಪುಂಡನ ವಿರುದ್ಧ ಎಫ್‌ಐಆರ್‌ – ಕಹಳೆ ನ್ಯೂಸ್

ಚಿಕ್ಕಮಗಳೂರು: ಇಲ್ಲಿನ ವಾಜಪೇಯಿ ಲೇಔಟ್‌ನಲ್ಲಿ ಯುವಕರ ಗುಂಪೊಂದು ನಡು ರಸ್ತೆಯಲ್ಲಿ ತಲ್ವಾರ್‌ನಿಂದ ಕೇಕ್ ಕತ್ತರಿಸಿ ಹುಟ್ಟುಹಬ್ಬ (Birthday) ಆಚರಿಸಿ, ಪುಂಡಾಟ ಮೆರೆದಿದೆ.
ಮಹಮದ್ ಸಮೀರ್ ಎಂಬಾತ ಮಧ್ಯರಾತ್ರಿ ವೇಳೆ ರೌಡಿ ಸ್ಟೈಲ್‌ನಲ್ಲಿ ಕಾರಿನಿಂದ ಕೆಳಗಿಳಿದು ಲಾಂಗ್‌ನಿಂದ ಕೇಕ್ ಕತ್ತರಿಸಿದ್ದಾನೆ. ಸುಮಾರು 5 ಕೆಜಿಗೂ ಅಧಿಕ ತೂಕದ ಬೃಹತ್ ಕೇಕ್ ಕತ್ತರಿಸಲಾಗಿದೆ. ಈ ವೇಳೆ 10ಕ್ಕೂ ಹೆಚ್ಚು ಯುವಕರು ಸ್ಥಳದಲ್ಲಿದ್ದರು. ಇದನ್ನು ವಿಡಿಯೋ ಮಾಡಿದ್ದ ಯುವಕರು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದರು.

ಜಾಹೀರಾತು

ವಿಡಿಯೋ ವೈರಲ್‌ ಆಗುತ್ತಿದ್ದಂತೆ ಎಚ್ಚೆತ್ತ ಚಿಕ್ಕಮಗಳೂರು ಗ್ರಾಮಾಂತರ ಠಾಣೆ ಪೊಲೀಸರು (Police), ಸಾರ್ವಜನಿಕ ರಸ್ತೆಯಲ್ಲಿ ತಲ್ವಾರ್ ಪ್ರದರ್ಶನ ಮಾಡಿದ ಯುವಕನ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಸಾರ್ವಜನಿಕ ಸ್ಥಳದಲ್ಲಿ ಲಾಂಗ್ ಹಿಡಿದು ಜನರಲ್ಲಿ ಭೀತಿ ಹುಟ್ಟಿಸಿ, ಶಾಂತಿ ಭಂಗ ಮಾಡಿದ ಆರೋಪದ ಮೇಲೆ ಯುವಕನ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ.