Sunday, June 21, 2026
ಜಿಲ್ಲೆಧಾರವಾಡಸುದ್ದಿ

ಧಾರವಾಡ ಕೋರ್ಟ್‌ಗೆ ಇ-ಮೇಲ್ ಬಾಂಬ್ ಬೆದರಿಕೆ : ಕಲಾಪ ಸ್ಥಗಿತ -ಕಹಳೆ ನ್ಯೂಸ್

ಧಾರವಾಡ: ಧಾರವಾಡ ಜಿಲ್ಲಾ ನ್ಯಾಯಾಲಯಕ್ಕೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ  ಬಂದ ಹಿನ್ನೆಲೆಯಲ್ಲಿ, ಮುಂಜಾಗ್ರತಾ ಕ್ರಮವಾಗಿ ಕೋರ್ಟ್ ಕಲಾಪಗಳನ್ನ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಯಿತು. ವಕೀಲರು, ಸಿಬ್ಬಂದಿ ಹಾಗೂ ಸಾರ್ವಜನಿಕರನ್ನು ಹೊರಗೆ ಕಳುಹಿಸಲಾಯಿತು.
ಧಾರವಾಡ ಉಪನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿರುವ ಜಿಲ್ಲಾ ನ್ಯಾಯಾಲಯಕ್ಕೆ ಅನುಮಾನಾಸ್ಪದ ಇ-ಮೇಲ್ ಬಂದಿದ್ದು, ಅದರಲ್ಲಿ ಬಾಂಬ್ ಸ್ಫೋಟದ ಬಗ್ಗೆ ಬೆದರಿಕೆ ಹಾಕಲಾಗಿದೆ. ಎಂಬ ಇ-ಮೇಲ್ ವಿಳಾಸದಿಂದ ಬಾಂಬ್ ಬೆದರಿಕೆ ಸಂದೇಶ ಕಳುಹಿಸಲಾಗಿದೆ.

ಜಾಹೀರಾತು