ನಾಳೆ NEET-UG ಮರುಪರೀಕ್ಷೆ, ಇಂದು ಮೆಗಾ ಮಾಕ್‌ಡ್ರಿಲ್ : 15,000 ಅರೆಸೈನಿಕ ಸಿಬ್ಬಂದಿ ಪತ್ರಿಕೆ ರವಾನೆ -ಕಹಳೆ ನ್ಯೂಸ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆಯಿಂದ ದೇಶಾದ್ಯಂತ ಸಂಚಲನ ಮೂಡಿಸಿದ್ದ ನೀಟ್-ಯುಜಿ ಮರುಪರೀಕ್ಷೆ ನಾಳೆ (ಜೂ.21) ದೇಶದ 551 ನಗರಗಳಲ್ಲಿ ನಡೆಯಲಿದೆ. ಈ ಹಿನ್ನೆಲೆ ಇಂದು ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ರಾಷ್ಟ್ರವ್ಯಾಪಿ ಮಾಕ್ ಡ್ರಿಲ್ ನಡೆಸಲಿದೆ.
ನೀಟ್ ಪರೀಕ್ಷೆಗೆ ಇದುವರೆಗೂ ನೋಡಿರದ ರೀತಿಯ ಭದ್ರತಾ ವ್ಯವಸ್ಥೆಯನ್ನು ಎನ್‌ಟಿಎ ನಿಯೋಜಿಸಿದ್ದು, ಈ ಸಂಬಂಧ ಇಂದು ಅಣುಕು ಕಾರ್ಯಾಚರಣೆ ನಡೆಸಲಾಗುತ್ತಿದೆ. ಬೆಳಗ್ಗೆ 9 ಗಂಟೆಯಿಂದ ರಾತ್ರಿ 8 ಗಂಟೆವರೆಗೂ ಪೂರ್ಣ ಪ್ರಮಾಣದ ಅಭ್ಯಾಸ ನಡೆಯಲಿದೆ. ಪ್ರಶ್ನೆಪತ್ರಿಕೆ ವಿತರಣೆ, ಉತ್ತರ ಪತ್ರಿಕೆ ಸಂಗ್ರಹ ಮತ್ತು ಸಾಗಣೆ ಸೇರಿದಂತೆ ಪರೀಕ್ಷಾ ಪ್ರಕ್ರಿಯೆಯ ಪ್ರತಿಯೊಂದು ಹಂತವನ್ನು ಅಣುಕು ಕಾರ್ಯಾಚರಣೆ ಒಳಗೊಂಡಿರಲಿದೆ.
5,500 ಕೇಂದ್ರಗಳಿಗೆ ಹೆಚ್ಚಿನ ಭದ್ರತೆ
ನಾಳೆ ದೇಶಾದ್ಯಂತ 5,500 ಕ್ಕೂ ಪರೀಕ್ಷಾ ಕೇಂದ್ರಗಳಿಗೆ ಹಿಂದೆಂದಿಗಿಂತಲೂ ಹೆಚ್ಚಿನ ಭದ್ರತಾ ವ್ಯವಸ್ಥೆ ನಿಯೋಜಿಸಲಾಗಿದೆ. ಆಯಾ ಜಿಲ್ಲಾಡಳಿತ, ರಾಜ್ಯ ಪೊಲೀಸ್ ಪಡೆಗಳು ಮತ್ತು ಕೇಂದ್ರ ಸರ್ಕಾರದ ವಿಶೇಷ ಭದ್ರತಾ ತಂಡಗಳನ್ನ ಒಳಗೊಂಡಂತೆ ಮೂರು ಹಂತದ ಭದ್ರತೆ ನಿಯೋಜಿಸಲಾಗಿದೆ.












