ನವದೆಹಲಿ: ಟಿಕೆಟ್ ಇಲ್ಲದೇ ರೈಲಿನಲ್ಲಿ ಪ್ರಯಾಣ ಮಾಡುವವರಿಗೆ ಇಲಾಖೆ ಬಿಸಿ ಮುಟ್ಟಿಸಲು ಮುಂದಾಗಿದೆ. ಜುಲೈ 1ರಿಂದಲೇ ಹೊಸ ನಿಯಮ ಜಾರಿಯಾಗುತ್ತಿದ್ದು, ಟಿಕೆಟ್‌ರಹಿತ ಪ್ರಯಾಣ ಸೇರಿದಂತೆ ಹಲವು ಉಲ್ಲಂಘನೆಗಳಿಗೆ ದುಪ್ಪಟ್ಟು ದಂಡ ವಿಧಿಸಲು ರೈಲ್ವೆ ಇಲಾಖೆ ನಿರ್ಧರಿಸಿದೆ.

ಇದುವರೆಗೆ ಟಿಕೆಟ್ ಇಲ್ಲದೆ ಪ್ರಯಾಣ ಮಾಡಿದರೆ ಟಿಕೆಟ್ ದರದ ಜೊತೆಗೆ 250 ರೂ. ದಂಡ ವಿಧಿಸಲಾಗುತ್ತಿತ್ತು. ಆದರೆ ಹೊಸ ನಿಯಮದ ಪ್ರಕಾರ ಟಿಕೆಟ್ ದರದ ಜೊತೆಗೆ 500 ರೂ. ದಂಡ ಪಾವತಿಸಬೇಕಾಗುತ್ತದೆ.
ಸುಮಾರು 13 ವರ್ಷಗಳ ಬಳಿಕ ರೈಲ್ವೆ ಇಲಾಖೆ ದಂಡದ ಮೊತ್ತವನ್ನು ಪರಿಷ್ಕರಿಸಿದೆ. ಪ್ರಯಾಣಿಕರಲ್ಲಿ ಶಿಸ್ತು ಮೂಡಿಸುವುದು ಮತ್ತು ಸುರಕ್ಷತೆ ಹೆಚ್ಚಿಸುವ ಉದ್ದೇಶದಿಂದ ಈ ಕ್ರಮ ಕೈಗೊಳ್ಳಲಾಗಿದೆ.