Sunday, June 21, 2026
ಸುದ್ದಿ

ವಿನೋದ್‌ ಪ್ರಭಾಕರ್‌ ಆರೋಗ್ಯದಲ್ಲಿ ಏರುಪೇರು : ಐಸಿಯುನಲ್ಲಿ ಚಿಕಿತ್ಸೆ- ಕಹಳೆ ನ್ಯೂಸ್

ಬೆಂಗಳೂರು: ಸ್ಯಾಂಡಲ್‌ವುಡ್‌ನ ಜನಪ್ರಿಯ ನಟ, ಮರಿ ಟೈಗರ್ ವಿನೋದ್ ಪ್ರಭಾಕರ್ ಅವರ ಆರೋಗ್ಯದಲ್ಲಿ ದಿಢೀರ್ ಏರುಪೇರು ಉಂಟಾಗಿದ್ದು, ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ  ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಜಾಹೀರಾತು

ವಿನೋದ್ ಪ್ರಭಾಕರ್ ಅವರಿಗೆ ರಕ್ತದೊತ್ತಡದಲ್ಲಿ ತೀವ್ರ ಏರುಪೇರು ಕಾಣಿಸಿಕೊಂಡಿದೆ. ಬೆಂಗಳೂರಿನ ನಾಗರಭಾವಿಯಲ್ಲಿರುವ ಖಾಸಗಿ ಆಸ್ಪತ್ರೆಗೆ ಅವರನ್ನು ದಾಖಲಿಸಲಾಗಿದ್ದು, ಇಂದು ಬೆಳಗಿನಿಂದಲೇ ವೈದ್ಯರು ಅವರಿಗೆ ತೀವ್ರ ನಿಗಾ ಘಟಕದಲ್ಲಿ ಇರಿಸಿ ಚಿಕಿತ್ಸೆ ನೀಡುತ್ತಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ವಿನೋದ್ ಪ್ರಭಾಕರ್ ಅವರು ಇತ್ತೀಚೆಗೆ ತಮ್ಮ ಮುಂಬರುವ ಬಹುನಿರೀಕ್ಷಿತ ‘ಬಲರಾಮ’ ಚಿತ್ರದ ಪ್ರಚಾರ ಕಾರ್ಯಗಳಲ್ಲಿ  ತೀವ್ರವಾಗಿ ಬ್ಯುಸಿಯಾಗಿದ್ದರು. ಸತತ ಕೆಲಸದ ಒತ್ತಡದ ನಡುವೆ, ಇಂದು ಮನೆಯಲ್ಲಿದ್ದಾಗಲೇ ಅವರ ಆರೋಗ್ಯದಲ್ಲಿ ಏರುಪೇರು ಕಾಣಿಸಿಕೊಂಡಿದೆ ಎನ್ನಲಾಗಿದೆ.

ಮನೆಯಲ್ಲಿದ್ದಾಗ ಆರೋಗ್ಯದಲ್ಲಿ ಸಣ್ಣ ಮಟ್ಟದ ಬದಲಾವಣೆ ಹಾಗೂ ಅಸ್ವಸ್ಥತೆ ಕಾಣಿಸಿಕೊಳ್ಳುತ್ತಿದ್ದಂತೆ ವಿನೋದ್ ಪ್ರಭಾಕರ್ ಅವರು ತಕ್ಷಣವೇ ಆಸ್ಪತ್ರೆಗೆ ಧಾವಿಸಿ ದಾಖಲಾಗಿದ್ದಾರೆ. ಸದ್ಯ ನುರಿತ ವೈದ್ಯರ ತಂಡ ಅವರಿಗೆ ಸೂಕ್ತ ಚಿಕಿತ್ಸೆ ನೀಡುತ್ತಿದ್ದು, ನಿಗಾ ವಹಿಸಿದೆ.