
ಲಂಡನ್: ಬ್ರಿಟನ್ ಪ್ರಧಾನಿ ಕೀರ್ ಸ್ಟಾರ್ಮರ್ ಅವರು ನಾಳೆ(ಜೂನ್ 22) ತಮ್ಮ ಸ್ಥಾನಕ್ಕೆ ಅಧಿಕೃತವಾಗಿ ರಾಜೀನಾಮೆ ನೀಡಲಿದ್ದಾರೆ ಎಂದು ಯುಕೆ ಮಾಧ್ಯಮಗಳು ವರದಿ ಮಾಡಿವೆ.
ಆಡಳಿತಾರೂಢ ಲೇಬರ್ ಪಕ್ಷದೊಳಗೆ ಅವರ ನಾಯಕತ್ವದ ವಿರುದ್ಧ ದೊಡ್ಡ ಮಟ್ಟದ ಅಸಮಾಧಾನ ಸ್ಫೋಟಗೊಂಡಿದೆ. ಪಕ್ಷದ ಒಳಗಿನ ತೀವ್ರ ರಾಜಕೀಯ ಒತ್ತಡದಿಂದಾಗಿ ಅವರು ಈ ನಿರ್ಧಾರಕ್ಕೆ ಬಂದಿದ್ದಾರೆ ಎಂದು ವರದಿಯಾಗಿದೆ.









