Monday, June 22, 2026
ಜಿಲ್ಲೆದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಶ್ರೀ. ಕ್ಷೇ. ಧ. ಗ್ರಾ. ಯೋಜನೆ ಬಿ. ಸಿ ಟ್ರಸ್ಟ್ (ರಿ ) ಕಣಿಯೂರು ವಲಯದ ಮೊಗ್ರು ಒಕ್ಕೂಟದ ವತಿಯಿಂದ ಉಂತನಾಜೆ ಶ್ರೀ ಲಕ್ಷ್ಮಿ ನಾರಾಯಣ ಭಜನಾ ಮಂದಿರದ ಸಭಾಂಗಣದಲ್ಲಿ ಅಭಿನಂದನಾ ಕಾರ್ಯಕ್ರಮ-ಕಹಳೆ ನ್ಯೂಸ್

ದೇಶದ ಸೈನ್ಯದಲ್ಲಿ 22 ವರ್ಷಗಳ ಕಾಲ ಅನನ್ಯ ಸೇವೆಗೈದು ನಿವೃತ್ತರಾದ ಮೊಗ್ರು ಗ್ರಾಮದ ಮುಗೇರಡ್ಕ ಬರೆಮೇಲು ನಿವಾಸಿ ಯೋಧ ಎ ಸಿ ಪಿ ಹವಾಲ್ದಾರ್ ದೇವಪ್ರಸಾದ್ ಗೌಡರವರಿಗೆ ಶ್ರೀ. ಕ್ಷೇ. ಧ. ಗ್ರಾ. ಯೋಜನೆ ಬಿ. ಸಿ ಟ್ರಸ್ಟ್ (ರಿ ) ಕಣಿಯೂರು ವಲಯದ ಮೊಗ್ರು ಒಕ್ಕೂಟದ ವತಿಯಿಂದ ಉಂತನಾಜೆ ಶ್ರೀ ಲಕ್ಷ್ಮಿ ನಾರಾಯಣ ಭಜನಾ ಮಂದಿರದ ಸಭಾಂಗಣದಲ್ಲಿ ಅಭಿನಂದನಾ ಕಾರ್ಯಕ್ರಮವನ್ನು ನೆರವೇರಿಸಲಾಯಿತು. ಈ ಸಂದರ್ಭದಲ್ಲಿ ಮೊಗ್ರು ಒಕ್ಕೂಟದ ಅಧ್ಯಕ್ಷರಾದ ಶ್ರೀಯುತ ಗಂಗಾಧರ ಪೂಜಾರಿ, ಉಪಾಧ್ಯಕ್ಷರಾದ ಕೃಷ್ಣ ಬೆಳ್ಚಡ, ಕಾರ್ಯದರ್ಶಿ ನವೀನ್, ಕೋಶಾಧಿಕಾರಿ ಕಮಲ ಹಾಗೂ ಕಣಿಯೂರು ವಲಯದ ಮೇಲ್ವಿಚಾರಕರಾದ ವಿಶ್ವನಾಥ್, ಸೇವಾಪ್ರತಿನಿಧಿ ಚಂದ್ರಕಲಾ, ಸಿ ಎಸ್ ಸಿ ಸೇವಾದಾರೆ ಪೂರ್ಣಿಮಾ ಹಾಗೂ ಒಕ್ಕೂಟದ ಸದಸ್ಯರು ಉಪಸ್ಥಿತರಿದ್ದರು.

ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು