
ಬೆಂಗಳೂರು: ರಾಜ್ಯದ ಜನತೆಗೆ ಶೀಘ್ರದಲ್ಲೇ ಸಾರಿಗೆ ಸಂಸ್ಥೆಗಳು ದರ ಏರಿಕೆಯ ಬಿಸಿ ಮುಟ್ಟಿಸಲು ಸಜ್ಜಾಗಿವೆ. ತೀವ್ರ ಆರ್ಥಿಕ ನಷ್ಟ ಹಾಗೂ ಡೀಸೆಲ್ ದರ (Diesel Price) ಏರಿಕೆಯಿಂದ ತತ್ತರಿಸಿರುವ ಕೆಎಸ್‌ಆರ್‌ಟಿಸಿ ಮತ್ತು ಬಿಎಂಟಿಸಿ ಸೇರಿದಂತೆ ನಾಲ್ಕೂ ಸಾರಿಗೆ ನಿಗಮಗಳು ಬಸ್ ಟಿಕೆಟ್ ದರವನ್ನು ಭಾರಿ ಪ್ರಮಾಣದಲ್ಲಿ ಹೆಚ್ಚಿಸಲು ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರಿಗೆ ಅಧಿಕೃತ ಪ್ರಸ್ತಾವನೆ ಸಲ್ಲಿಸಿವೆ.
ನಾಲ್ಕೂ ಸಾರಿಗೆ ನಿಗಮಗಳು ಪ್ರತ್ಯೇಕವಾಗಿ ದರ ಪರಿಷ್ಕರಣೆಗೆ ಬೇಡಿಕೆ ಇಟ್ಟಿದೆ. ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯು ಟಿಕೆಟ್ ದರದಲ್ಲಿ ಬರೋಬ್ಬರಿ 44% ರಷ್ಟು ಏರಿಕೆ ಮಾಡಲು ಪ್ರಸ್ತಾಪಿಸಿದೆ. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯು ಟಿಕೆಟ್ ದರವನ್ನು 33% ರಷ್ಟು ಹೆಚ್ಚಿಸಲು ಅನುಮತಿ ಕೋರಿದೆ. ಇದರೊಂದಿಗೆ ಕಲ್ಯಾಣ ಕರ್ನಾಟಕ ಮತ್ತು ವಾಯುವ್ಯ ಕರ್ನಾಟಕ ಸಾರಿಗೆ ಸಂಸ್ಥೆಗಳೂ ಸಹ ದರ ಏರಿಕೆಗೆ ಒತ್ತಾಯಿಸಿವೆ.










