Monday, June 22, 2026
ಸುದ್ದಿ

ಮಜಿ ವೀರಕಂಭ ಶಾಲೆಯಲ್ಲಿ ಅಂತರರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮ-ಕಹಳೆ ನ್ಯೂಸ್

ಯೋಗದ ಇತಿಹಾಸವು ಸಾವಿರಾರು ವರ್ಷಗಳಷ್ಟು ಹಳೆಯದು. ಪತಂಜಲಿ ಅವರು ಯೋಗವನ್ನು ವ್ಯವಸ್ಥಿತ ರೂಪದಲ್ಲಿ ನಿರೂಪಿಸಿದ್ದಾರೆ. ಯೋಗದಲ್ಲಿ ಆಸನಗಳು, ಪ್ರಾಣಾಯಾಮ, ಧ್ಯಾನ ಮತ್ತು ವಿವಿಧ ಶಾರೀರಿಕ ಹಾಗೂ ಮಾನಸಿಕ ಅಭ್ಯಾಸಗಳು ಸೇರಿವೆ.
ಪ್ರತಿ ವರ್ಷ ಜೂನ್ 21ರಂದು ಅಂತರರಾಷ್ಟ್ರೀಯ ಯೋಗ ದಿನ ಆಚರಿಸಲಾಗುತ್ತದೆ. ಈ ದಿನದ ಉದ್ದೇಶ ಯೋಗದ ಮಹತ್ವವನ್ನು ವಿಶ್ವದಾದ್ಯಂತ ಜನರಿಗೆ ತಿಳಿಸುವುದು.
ಯೋಗವು ಕೇವಲ ವ್ಯಾಯಾಮವಲ್ಲ; ಅದು ಸಮಗ್ರ ಆರೋಗ್ಯ ಮತ್ತು ಮಾನಸಿಕ ನೆಮ್ಮದಿಯನ್ನು ನೀಡುವ ಜೀವನ ಪದ್ಧತಿಯಾಗಿದೆ. ನಿಯಮಿತ ಯೋಗಾಭ್ಯಾಸವು ಉತ್ತಮ ಆರೋಗ್ಯ ಹಾಗೂ ಸಂತೋಷದ ಜೀವನಕ್ಕೆ ದಾರಿ ಮಾಡಿಕೊಡುತ್ತದೆ.ಎಂಬುದಾಗಿ ಪತಂಜಲಿ ಯೋಗ ಶಿಕ್ಷಣ ಸಮಿತಿ ಕೆಲಿಂಜ ಶಾಖೆ ಇದರ ಸದಸ್ಯರಾದ ರಾಮಣ್ಣ ಮೂಲ್ಯ ಹೇಳಿದರು.

ಜಾಹೀರಾತು

ಅವರು ಜೂನ್ 22 ಸೋಮವಾರ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಮಜಿ ವೀರಕಂಭ ಇಲ್ಲಿ ಅಂತರರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮವನ್ನು ಉದ್ದೇಶಿಷಿ ಮಾತನಾಡಿದರು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ನಂತರ ಪತಂಜಲಿ ಯೋಗ ಶಿಕ್ಷಣ ಸಮಿತಿ ಕೆಲಿಂಜ ಶಾಖೆ ಇದರ ಸದಸ್ಯರಾದ ಕುಸುಮ ಶೆಟ್ಟಿ, ಹಾಗೂ ತೇಜಾಕ್ಷಿ ಯವರು ವಿದ್ಯಾರ್ಥಿಗಳಿಗೆ ಪ್ರಾಯೋಗಿಕ ಯೋಗ ತರಬೇತಿ ನೀಡಿದರು.
ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷ ಕೊರಗಪ್ಪ ನಾಯ್ಕ್, ಶಾಲಾ ಶಿಕ್ಷಕ ವೃಂದ ಉಪಸ್ಥಿತರಿದ್ದರು.
ಮುಖ್ಯ ಶಿಕ್ಷಕಿ ಬೆನಡಿಕ್ಟಾ ಆಗ್ನೇಸ್ ಮಂಡೋನ್ಸ ಸ್ವಾಗತಿಸಿ, ದೈಹಿಕ ಶಿಕ್ಷಣ ಶಿಕ್ಷಕ ಇಂದು ಶೇಖರ್ ವಂದಿಸಿ ಕಾಯ೯ಕ್ರಮ ನಿರೂಪಿಸಿದರು..