Monday, June 22, 2026
ಸುದ್ದಿ

NEET ಮರುಪರೀಕ್ಷೆ ಬರೆಯಲು ಬಂದಿದ್ದ 9 ನಕಲಿ ಅಭ್ಯರ್ಥಿಗಳು ಸೇರಿ 30 ಮಂದಿ ಅರೆಸ್ಟ್‌ -ಕಹಳೆ ನ್ಯೂಸ್

ಪಾಟ್ನಾ: ಬಿಹಾರದ  ವಿವಿಧ ಪರೀಕ್ಷಾ ಕೇಂದ್ರಗಳಲ್ಲಿ ನಿನ್ನೆ (ಜೂ 21) ನಡೆದ NEET UG ಮರುಪರೀಕ್ಷೆ ವೇಳೆ 9 ನಕಲಿ ಅಭ್ಯರ್ಥಿಗಳು ಹಾಗೂ ಅವರೊಂದಿಗಿದ್ದ 30 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ.

ಜಾಹೀರಾತು

ಬಿಹಾರದ ಲಖಿಸರಾಯ್  ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆ ಜಂಟಿ ಕಾರ್ಯಾಚರಣೆ ನಡೆಸಿದೆ. ಪರೀಕ್ಷಾ ಕೇಂದ್ರಗಳ ಮೇಲೆ ದಾಳಿ ನಡೆಸಿ ಬೇರೆಯವರ ಹೆಸರಿನಲ್ಲಿ ಪರೀಕ್ಷೆ ಬರೆಯಲು ಬಂದಿದ್ದ 9 ನಕಲಿ ಅಭ್ಯರ್ಥಿಗಳು ಸೇರಿ 30 ಜನರನ್ನು ಪತ್ತೆಹಚ್ಚಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಮೂಲಗಳ ಪ್ರಕಾರ, ಲಖಿಸರಾಯ್ ಜಿಲ್ಲೆಯ ವಿವಿಧ ಕೇಂದ್ರಗಳಲ್ಲಿ ನಡೆಸಿದ ತಪಾಸಣೆ ವೇಳೆ 30 ಜನ ಸಿಕ್ಕಿಬಿದ್ದಿದ್ದಾರೆ. ಈ ಪೈಕಿ 9 ನಕಲಿ ಅಭ್ಯರ್ಥಿಗಳು ಪರೀಕ್ಷೆ ಬರೆಯಲು ಬಂದಿದ್ದರೆ, ಇನ್ನುಳಿದ 21 ಜನರು ಈ ಪರೀಕ್ಷಾ ವಂಚನೆ ಜಾಲಕ್ಕೆ ಸಹಾಯ ಮತ್ತು ಅಕ್ರಮದಲ್ಲಿ ಭಾಗಿಯಾಗಿದ್ದರು ಎಂದು ತಿಳಿದುಬಂದಿದೆ. ಸದ್ಯ ಅಧಿಕಾರಿಗಳು ಈ ಕುರಿತು ತೀವ್ರ ತನಿಖೆ ನಡೆಸುತ್ತಿದ್ದಾರೆ.

ಈ ಜಾಲದಲ್ಲಿ ಇನ್ನೂ ಹಲವು ಪ್ರಭಾವಿಗಳು ಭಾಗಿಯಾಗಿರುವ ಶಂಕೆಯಿದ್ದು, ತನಿಖೆ ಪೂರ್ಣಗೊಂಡ ಬಳಿಕ ಇಡೀ ವಂಚನೆ ಜಾಲದ ಬಗ್ಗೆ ಬಹಿರಂಗಪಡಿಸುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.