
ಬೆಂಗಳೂರು: ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಅಶ್ಲೀಲ ಹಾಗೂ ಅವಹೇಳನಕಾರಿ ಕಾಮೆಂಟ್‌ಗಳನ್ನು ಪೋಸ್ಟ್ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳ ಜಾಮೀನು ಅರ್ಜಿಯನ್ನು ಕರ್ನಾಟಕ ಹೈಕೋರ್ಟ್‌ನ ಏಕಸದಸ್ಯ ಪೀಠ ವಜಾಗೊಳಿಸಿದೆ.
ಈ ಪ್ರಕರಣದಲ್ಲಿ ಆರೋಪಿಗಳಾದ ಪ್ರಶಾಂತ್ ತಲ್ವಾರ್, ಚಂದ್ರಶೇಖರ್ ಹಾಗೂ ನಿಂಗರಾಜ್ ಗುಲಾಪ್ಪ ತಲ್ವಾರ್ ಅವರು ಸಲ್ಲಿಸಿದ್ದ ಜಾಮೀನು ಅರ್ಜಿಗಳನ್ನು ನ್ಯಾಯಾಲಯ ತಿರಸ್ಕರಿಸಿದೆ. ಇದಕ್ಕೂ ಮೊದಲು ಸೆಷನ್ಸ್ ಕೋರ್ಟ್ ಕೂಡ ಮೂವರು ಆರೋಪಿಗಳ ಜಾಮೀನು ಅರ್ಜಿಯನ್ನು ವಜಾಗೊಳಿಸಿತ್ತು. ಸೆಷನ್ಸ್ ಕೋರ್ಟ್ ಆದೇಶವನ್ನು ಪ್ರಶ್ನಿಸಿ ಆರೋಪಿಗಳು ಹೈಕೋರ್ಟ್ ಮೆಟ್ಟಿಲೇರಿದ್ದರು.‘ಡೆವಿಲ್’ ಚಿತ್ರದ ಪ್ರಚಾರದ ಸಂದರ್ಭದಲ್ಲಿ ವಿಜಯಲಕ್ಷ್ಮಿ ಅವರ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಅಶ್ಲೀಲ ಹಾಗೂ ಅವಹೇಳನಕಾರಿ ಕಾಮೆಂಟ್‌ಗಳನ್ನು ಹಾಕಿರುವ ಆರೋಪ ಈ ಮೂವರ ವಿರುದ್ಧ ಕೇಳಿಬಂದಿತ್ತು. ಘಟನೆಗೆ ಸಂಬಂಧಿಸಿ ವಿಜಯಲಕ್ಷ್ಮಿ ಅವರು ನಗರ ಪೊಲೀಸ್ ಆಯುಕ್ತರ ಕಚೇರಿಗೆ ತೆರಳಿ ದೂರು ನೀಡಿದ್ದರು. ಅವರ ದೂರಿನ ಆಧಾರದಲ್ಲಿ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.










