Friday, June 26, 2026
ದೆಹಲಿರಾಜ್ಯಸುದ್ದಿ

ಉದ್ಯೋಗ ಭವನದ ಬಳಿಯ ಕಾರ್ಮಿಕ ಶಿಬಿರದಲ್ಲಿ ಭೀಕರ ಅಗ್ನಿ ಅವಘಡ – 200ಕ್ಕೂ ಹೆಚ್ಚು ಟಿನ್ ಶೆಡ್‌ಗಳು ಭಸ್ಮ -ಕಹಳೆ ನ್ಯೂಸ್

ನವದೆಹಲಿ: ಕಾರ್ಮಿಕರ ಶಿಬಿರದಲ್ಲಿ  ಭೀಕರ ಅಗ್ನಿ ಅವಘಡ ಸಂಭವಿಸಿದ ಪರಿಣಾಮ ಸುಮಾರು 200ಕ್ಕೂ ಹೆಚ್ಚು ಟಿನ್ ಶೆಡ್ (Tin Shed) ಮನೆಗಳು ಸುಟ್ಟು ಕರಕಲಾಗಿರುವ ಘಟನೆ ದೆಹಲಿಯ ಉದ್ಯೋಗ ಭವನದ ಬಳಿ ನಡೆದಿದೆ.

ಜಾಹೀರಾತು

ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಅಥವಾ ಗಾಯಗಳಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಘಟನೆಯಿಂದ ಉಂಟಾದ ನಷ್ಟದ ಪ್ರಮಾಣ ಇನ್ನೂ ಸ್ಪಷ್ಟವಾಗಿಲ್ಲ. ಅಗ್ನಿ ಅವಘಡಕ್ಕೆ ನಿಖರ ಕಾರಣ ತಿಳಿದುಬಂದಿಲ್ಲವಾದರೂ, ವಿದ್ಯುತ್ ಪ್ಯಾನೆಲ್‌ನಲ್ಲಿ ಕಾಣಿಸಿಕೊಂಡ ಬೆಂಕಿಯೇ ಘಟನೆಗೆ ಕಾರಣ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು