ಪ್ರಿಯಕರನೊಂದಿಗೆ ಸೇರಿ ಭಾವಿ ಪತಿ ಕೊಲೆ ಕೇಸ್ : ಆರೋಪಿ ಜೋಡಿ 7 ದಿನ ಪೊಲೀಸ್ ಕಸ್ಟಡಿಗೆ -ಕಹಳೆ ನ್ಯೂಸ್

ಮುಂಬೈ: ಪ್ರಿ-ವೆಡ್ಡಿಂಗ್ ಶೂಟಿಂಗ್ ನೆಪದಲ್ಲಿ ಮಹಾರಾಷ್ಟ್ರದ ಯುವತಿ ಪ್ರಿಯಕರನೊಂದಿಗೆ ಸೇರಿ ಭಾವಿ ಪತಿಯನ್ನು ಹತ್ಯೆ ಮಾಡಿರುವ ಕೇಸ್ ಮಹತ್ವದ ತಿರುವು ಪಡೆದುಕೊಂಡಿದೆ. ಆರೋಪಿ ಜೋಡಿಯನ್ನು 7 ದಿನ ಪೊಲೀಸ್ ಕಸ್ಟಡಿಗೆ ಒಪ್ಪಿಸಲಾಗಿದೆ.
ಪುಣೆಯ ಉದ್ಯಮಿ ಕೇತನ್ ಅಗರ್ವಾಲ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿಗಳಾದ ಸಿಯಾ ಗೋಯಲ್ ಮತ್ತು ಚೇತನ್‌ನನ್ನು ಮಂಗಳವಾರ ಲೋನಾವಾಲಾ ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿದರು. ಪ್ರಕರಣದ ತನಿಖೆಗಾಗಿ ಜೂನ್ 29ರವರೆಗೆ 7 ದಿನಗಳ ಪೊಲೀಸ್ ಕಸ್ಟಡಿಗೆ ಒಪ್ಪಿಸಲಾಗಿದೆ.
ಸದ್ಯ ಪ್ರಕರಣದ ತನಿಖೆ ಮುಂದುವರಿದಿದ್ದು, ಸಿಯಾ ಮತ್ತು ಚೇತನ್ ವಿರುದ್ಧ ಕೊಲೆ ಹಾಗೂ ಸಂಚು ಆರೋಪದಡಿ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.











