
ಬೆಂಗಳೂರು: ನವಿಲು ಗರಿಗಳನ್ನು ಬಳಸಿ ಮಾಡಿದ್ದ ‘ಹೇ ನವಿಲೇ’ ರೀಲ್ಸ್ ವಿವಾದಕ್ಕೆ ಕಾರಣವಾದ ಬಳಿಕ, ಬಿಗ್‌ಬಾಸ್ ಮಾಜಿ ಸ್ಪರ್ಧಿಗಳಾದ ನಿವೇದಿತಾ ಗೌಡ ಮತ್ತು ಕಿಶನ್ ಇದೀಗ ಸಾರ್ವಜನಿಕವಾಗಿ ಕ್ಷಮೆ ಕೋರಿದ್ದಾರೆ.
ವನ್ಯಜೀವಿ ಸಂರಕ್ಷಣಾ ಕಾಯ್ದೆ ಉಲ್ಲಂಘನೆ ಆರೋಪ ಕೇಳಿಬಂದ ಹಿನ್ನೆಲೆ, ಇಬ್ಬರೂ ರೀಲ್ಸ್ ಡಿಲೀಟ್ ಮಾಡಿ, ವಿಡಿಯೋ ಮೂಲಕ ಸ್ಪಷ್ಟನೆ ನೀಡಿದ್ದಾರೆ.











