Wednesday, June 24, 2026
ಸುದ್ದಿ

ಮುಂಬೈನಲ್ಲಿ ಭಾರೀ ಮಳೆಯ ಅಬ್ಬರ; ಜನಜೀವನ ಅಸ್ತವ್ಯಸ್ತ-ಕಹಳೆ ನ್ಯೂಸ್

ಮುಂಬೈ: ಮಂಗಳವಾರ ರಾತ್ರಿ ಸುರಿದ ಭಾರೀ ಮಳೆಯಿಂದ ಮುಂಬೈನ ಹಲವು ಭಾಗಗಳು ಜಲಾವೃತಗೊಂಡಿವೆ. ರಸ್ತೆಗಳಲ್ಲಿ ನೀರು ನಿಂತಿದ್ದು, ವಾಹನ ಸಂಚಾರಕ್ಕೆ ತೊಂದರೆಯಾಗಿದೆ. ಹಲವೆಡೆ ಮರಗಳು ಉರುಳಿಬಿದ್ದಿದ್ದು, ಕೆಲವು ಪ್ರದೇಶಗಳಲ್ಲಿ ಗೋಡೆ ಕುಸಿತದ ಘಟನೆಗಳೂ ವರದಿಯಾಗಿವೆ. ಭಾರತೀಯ ಹವಾಮಾನ ಇಲಾಖೆ ಆರೆಂಜ್‌ ಅಲರ್ಟ್‌ ನೀಡಿದ್ದು, ಮುಂದಿನ 48 ಗಂಟೆ ಭಾರೀ ಮಳೆ ಎಚ್ಚರಿಕೆ ನೀಡಲಾಗಿದೆ.

ಜಾಹೀರಾತು

ಮಂಗಳವಾರ ರಾತ್ರಿ 8:30 ರಿಂದ ಬುಧವಾರ ಬೆಳಗ್ಗೆ 5:30ರ ನಡುವೆ ರಾಮ ಮಂದಿರ, ಕೊಲಾಬಾ ಹಾಗೂ ಸಾಂತಾಕ್ರೂಜ್ ಪ್ರದೇಶಗಳಲ್ಲಿ 200 ಮಿ.ಮೀ.ಗಿಂತ ಹೆಚ್ಚು ಮಳೆಯಾಗಿದೆ. ರಾಮ ಮಂದಿರದಲ್ಲಿ 224 ಮಿ.ಮೀ., ಕೊಲಾಬಾದಲ್ಲಿ 218.5 ಮಿ.ಮೀ. ಹಾಗೂ ಸಾಂತಾಕ್ರೂಜ್‌ನಲ್ಲಿ 210.6 ಮಿ.ಮೀ. ಮಳೆಯಾಗಿದೆ.ಗಾಯಗೊಂಡಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಭಾರೀ ಮಳೆಯಿಂದ ರೈಲು ಸಂಚಾರಕ್ಕೂ ಹೊಡೆತ ಬಿದ್ದಿದೆ. ತುರ್ಭೆ ಮತ್ತು ಕೋಪರ್ಖೈರನೆ ನಿಲ್ದಾಣಗಳ ನಡುವೆ ಹಳಿ ಕುಸಿತ ಉಂಟಾದ ಹಿನ್ನೆಲೆಯಲ್ಲಿ ಕೆಲಕಾಲ ರೈಲು ಸೇವೆಯಲ್ಲಿ ವ್ಯತ್ಯಯ ಉಂಟಾಯಿತು. ನಂತರ ಹಳಿಯನ್ನು ದುರಸ್ತಿ ಮಾಡಿ ರೈಲು ಸಂಚಾರವನ್ನು ಪುನರಾರಂಭಿಸಲಾಯಿತು. ಆದರೆ, ಪರಿಸ್ಥಿತಿ ಇದೀಗ ನಿಧಾನವಾಗಿ ಸಹಜ ಸ್ಥಿತಿಗೆ ಮರಳುತ್ತಿದೆ. ನೀರು ನಿಂತಿದ್ದ ಹಲವು ಪ್ರದೇಶಗಳಲ್ಲಿ ನೀರು ಇಳಿದಿದ್ದು, ಸಂಚಾರವೂ ಸಾಮಾನ್ಯಗೊಂಡಿದೆ. ಮಳೆ ಚಟುವಟಿಕೆ ಮುಂದುವರಿಯುವ ಸಾಧ್ಯತೆ ಇರುವುದರಿಂದ, ನಗರದಲ್ಲಿ ನಾಗರಿಕ ಹಾಗೂ ವಿಪತ್ತು ನಿರ್ವಹಣಾ ತಂಡಗಳು ಕಟ್ಟೆಚ್ಚರ ವಹಿಸಿ ಪರಿಸ್ಥಿತಿಯ ಮೇಲೆ ನಿಗಾ ಇಟ್ಟಿವೆ.