Thursday, June 25, 2026
ಸುದ್ದಿ

ಕನ್ನಡ ಸಾಹಿತ್ಯದ ಮೂಲಕ ಸಮಾಜದಲ್ಲಿ ಆರೋಗ್ಯ ಜಾಗೃತಿ ಮೂಡಿಸುವ ಮಹತ್ವದ ಉದ್ದೇಶದಿಂದ ಕರ್ನಾಟಕ ಆರೋಗ್ಯ ಸಾಹಿತ್ಯ ಪರಿಷತ್ ವತಿಯಿಂದ “ಆರೋಗ್ಯ ಜಾಗೃತಿಗಾಗಿ ರಾಜ್ಯ ಮಟ್ಟದ ಕವನ ಮತ್ತು ಕಥಾ ಸ್ಪರ್ಧೆ – 2026”- ಕಹಳೆ ನ್ಯೂಸ್

ಕನ್ನಡ ಸಾಹಿತ್ಯದ ಮೂಲಕ ಸಮಾಜದಲ್ಲಿ ಆರೋಗ್ಯ ಜಾಗೃತಿ ಮೂಡಿಸುವ ಮಹತ್ವದ ಉದ್ದೇಶದಿಂದ ಕರ್ನಾಟಕ ಆರೋಗ್ಯ ಸಾಹಿತ್ಯ ಪರಿಷತ್ ವತಿಯಿಂದ “ಆರೋಗ್ಯ ಜಾಗೃತಿಗಾಗಿ ರಾಜ್ಯ ಮಟ್ಟದ ಕವನ ಮತ್ತು ಕಥಾ ಸ್ಪರ್ಧೆ – 2026” ಅನ್ನು ಆಯೋಜಿಸಲಾಗಿದೆ. “ವೈದ್ಯಲೋಕ” ಆರೋಗ್ಯ ಮಾಸ ಪತ್ರಿಕೆ ಮತ್ತು ಮೀಡಿಯಾ ಐಕಾನ್* ಸಂಸ್ಥೆಗಳು ಈ ಸ್ಪರ್ಧೆಗೆ ಸಹಯೋಗ ನೀಡುತ್ತಿವೆ.

ಜಾಹೀರಾತು

ಸ್ಪರ್ಧೆಯ ಉದ್ದೇಶ:
ಬರವಣಿಗೆಯ ಮೂಲಕ ಆರೋಗ್ಯ ಮತ್ತು ಸ್ವಾಸ್ಥ್ಯದ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸಿ, ಸಮಾಜದಲ್ಲಿ ಸಕಾರಾತ್ಮಕ ಬದಲಾವಣೆಗೆ ಧ್ವನಿಯಾಗುವುದು. ನಿಮ್ಮ ಪದಗಳು ಆರೋಗ್ಯಕರ ಭವಿಷ್ಯಕ್ಕೆ ಪ್ರೇರಣೆಯಾಗಲಿ ಎಂಬುದು ಪರಿಷತ್ತಿನ ಆಶಯ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

3 ವಿಭಾಗಗಳಲ್ಲಿ ಸ್ಪರ್ಧೆ:
1. ಸಾರ್ವಜನಿಕರು
2. ವೈದ್ಯರು ಮತ್ತು ಆರೋಗ್ಯ ವೃತ್ತಿಪರರು
3. ವೈದ್ಯಕೀಯ ವಿದ್ಯಾರ್ಥಿಗಳು

ಏಕೆ ಭಾಗವಹಿಸಬೇಕು..?
– ನಿಮ್ಮ ಸೃಜನಶೀಲತೆಯನ್ನು ಪ್ರದರ್ಶಿಸಲು ಸುವರ್ಣ ಅವಕಾಶ
– ಸಾಹಿತ್ಯದ ಮೂಲಕ ಆರೋಗ್ಯ ಜಾಗೃತಿ ಹರಡಲು ವೇದಿಕೆ
– ಆಯ್ದ ಬರಹಗಳು *‘ವೈದ್ಯಲೋಕ’ ಮಾಸಪತ್ರಿಕೆ ಹಾಗೂ ವೆಬ್‌ಸೈಟ್‌ನಲ್ಲಿ* ಪ್ರಕಟ
– ಆರೋಗ್ಯ ವಿಷಯ ಲೇಖಕರಾಗಿ ಗುರುತಿಸಿಕೊಳ್ಳುವ ಅವಕಾಶ
– *ವಿಜೇತರಿಗೆ ಪ್ರಶಸ್ತಿ, ಬಹುಮಾನ ಮತ್ತು ಪ್ರಮಾಣಪತ್ರ*

ಪ್ರಮುಖ ದಿನಾಂಕ:
ಕಥೆ ಮತ್ತು ಕವನ ಕಳುಹಿಸಲು ಕೊನೆಯ ದಿನಾಂಕ: ಜೂನ್ 30, 2026

ಬರಹಗಳನ್ನು ಕಳುಹಿಸಬೇಕಾದ ವಿಳಾಸ:
ಇಮೇಲ್: mediaicon@ymail.com
ವಾಟ್ಸಪ್: 81975 54373

ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ:
ಶ್ರೀ ಕೃಷ್ಣ ಎಂ: 81975 54373
ಎನ್.ವಿ. ರಮೇಶ್: 98455 65238