Thursday, June 25, 2026
ಸುದ್ದಿ

ತಮಿಳುನಾಡಿನಲ್ಲಿ ಹುಟ್ಟುವ ಮಕ್ಕಳಿಗೆ 1 ಗ್ರಾಂ ಉಂಗುರ : ಪ್ರಣಾಳಿಕೆಯಲ್ಲಿ ಘೋಷಿಸಿದ್ದ ಮುಖ್ಯಮಂತ್ರಿ ವಿಜಯ್‌ : ಸೋದರ ಮಾವನ ಜವಾಬ್ದಾರಿ ಹೊತ್ತ ಸರ್ಕಾರ-ಕಹಳೆ ನ್ಯೂಸ್

ಚೆನ್ನೈ: ಚುನಾವಣಾ ಪ್ರಣಾಳಿಕೆಯಲ್ಲಿ ಘೋಷಣೆ ಮಾಡಿದಂತೆ ತಮಿಳುನಾಡಿನ ವಿಜಯ್‌ ಸರ್ಕಾರವು ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಜನಿಸುವ ಪ್ರತಿಯೊಂದು ನವಜಾತ ಶಿಶುವಿಗೆ 1 ಗ್ರಾಂ ಚಿನ್ನದ ಉಂಗುರವನ್ನು ಉಚಿತವಾಗಿ ನೀಡುವ ತೈಮಾಮನ್‌ ತಂಗ ಮೋತಿರಾಂ ತಿಟ್ಟಂ  ಎಂಬ ಐತಿಹಾಸಿಕ ಯೋಜನೆಯನ್ನು ಪ್ರಕಟಿಸಿದೆ.

ಜಾಹೀರಾತು

ತಮಿಳುನಾಡಿನಲ್ಲಿ ಶಾಶ್ವತವಾಗಿ ವಾಸಿಸುತ್ತಿರುವ ಸರ್ಕಾರಿ ಆಸ್ಪತ್ರೆಗಳಲ್ಲಿ ಜನಿಸುವ ಎಲ್ಲಾ ಮಕ್ಕಳಿಗೆ ಈ ಯೋಜನೆ ಅನ್ವಯಿಸುತ್ತದೆ. ಮುಖ್ಯಮಂತ್ರಿ ವಿಜಯ್  ಅವರ ಜನ್ಮದಿನವಾದ ಜೂನ್ 22 ರಿಂದ ಪೂರ್ವಾನ್ವಯವಾಗುವಂತೆ ಈ ಯೋಜನೆ ಜಾರಿಗೆ ಬರಲಿದೆ. ಮಾಜಿ ಮುಖ್ಯಮಂತ್ರಿ ಸಿ.ಎನ್. ಅಣ್ಣಾದುರೈ ಅವರ ಜನ್ಮದಿನವಾದ ಸೆಪ್ಟೆಂಬರ್ 15 ರಂದು ಈ ಯೋಜನೆಗೆ ಅಧಿಕೃತವಾಗಿ ಚಾಲನೆ ಸಿಗಲಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಪ್ರಸ್ತುತ ಮಾರುಕಟ್ಟೆ ದರದ ಪ್ರಕಾರ ಸುಮಾರು 13,600 ರೂ. ಮೌಲ್ಯದ 1 ಗ್ರಾಂ ಚಿನ್ನದ ಉಂಗುರವನ್ನು ಶಿಶುಗಳಿಗೆ ನೀಡಲಾಗುತ್ತದೆ. ಈ ಯೋಜನೆಗಾಗಿ ಸರ್ಕಾರವು ವಾರ್ಷಿಕವಾಗಿ 755.83 ಕೋಟಿ ರೂ. ಹಣವನ್ನು ಮೀಸಲಿಟ್ಟಿದೆ.

ತಮಿಳುನಾಡಿನಲ್ಲಿ ಮಗು ಜನಿಸಿದಾಗ ಮನೆಗೆ ಬರಮಾಡಿಕೊಳ್ಳಲು ಸೋದರ ಮಾವನ ಕಡೆಯಿಂದ ಚಿನ್ನದ ಉಡುಗೊರೆ ನೀಡುವ (ತೈಮಾಮನ್ ಸೀರ್) ಪದ್ಧತಿ ಇದೆ. ಈಗ ಸರ್ಕಾರವೇ ಸಾಂಕೇತಿಕವಾಗಿ ಆ ಸೋದರ ಮಾವನ ಜವಾಬ್ದಾರಿಯನ್ನು ಹೊತ್ತು, ಪ್ರತಿ ಮಗುವಿಗೆ ಪ್ರೀತಿ ಈ ಚಿನ್ನದ ಉಂಗುರವನ್ನು ನೀಡಲು ಮುಂದಾಗಿದೆ.