Thursday, June 25, 2026
ಸುದ್ದಿ

ಆಣೆ – ಪ್ರಮಾಣಕ್ಕೆ ಬ್ರೇಕ್ ಬೆನ್ನಲ್ಲೇ ಧರ್ಮಸ್ಥಳಕ್ಕೆ ಭೇಟಿ ನೀಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ..!!-ಕಹಳೆ ನ್ಯೂಸ್

ಬೆಂಗಳೂರು: ರಾಜ್ಯ ಬಿಜೆಪಿಯಲ್ಲಿ ಆಂತರಿಕ ಅಸಮಾಧಾನ ಮತ್ತು ಅಡ್ಡಮತದಾನದ ವಿವಾದ ಭುಗಿಲೆದ್ದಿರುವ ಬೆನ್ನಲ್ಲೇ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಧರ್ಮಸ್ಥಳಕ್ಕೆ ದೇವಸ್ಥಾನಕ್ಕೆ ಭೇಟಿ ನೀಡಲಿದ್ದಾರೆ.

ಜಾಹೀರಾತು

ಇಂದು ರಾತ್ರಿ ಮಂಗಳೂರಿನ ವಿಮಾನ ನಿಲ್ದಾಣಕ್ಕೆ ಆಗಮಿಸಲಿರುವ ವಿಜಯೇಂದ್ರ ಬಳಿಕ ರಸ್ತೆ ಮಾರ್ಗವಾಗಿ ಧರ್ಮಸ್ಥಳಕ್ಕೆ ತೆರಳಲಿದ್ದಾರೆ. ನಾಳೆ ಬೆಳಗ್ಗೆ ಅವರು ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆಯಲಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ರಾಜ್ಯಸಭಾ ಅಥವಾ ವಿಧಾನಪರಿಷತ್ ಚುನಾವಣೆಯಲ್ಲಿ ನಡೆದಿದೆ ಎನ್ನಲಾದ ಅಡ್ಡಮತದಾನದ ಸತ್ಯಾಸತ್ಯತೆ ತಿಳಿಯಲು ಧರ್ಮಸ್ಥಳದಲ್ಲಿ ಬಿಜೆಪಿ ಶಾಸಕಾಂಗ ಪಕ್ಷದ ಸಭೆ ನಡೆಸಿ, ಶಾಸಕರಿಂದ ಆಣೆ-ಪ್ರಮಾಣ ಮಾಡಿಸಲು ಮೊದಲು ಯೋಜಿಸಲಾಗಿತ್ತು. ಆದರೆ, ಪವಿತ್ರ ಕ್ಷೇತ್ರವಾದ ಧರ್ಮಸ್ಥಳದಲ್ಲಿ ಇಂತಹ ರಾಜಕೀಯ ಸಭೆ ಹಾಗೂ ಆಣೆ-ಪ್ರಮಾಣದ ರಾಜಕಾರಣ ಮಾಡುವುದಕ್ಕೆ ಪಕ್ಷದ ಒಳಗಡೆಯೇ ಹಿರಿಯ ನಾಯಕರಿಂದ ತೀವ್ರ ಆಕ್ಷೇಪ ವ್ಯಕ್ತವಾಗಿತ್ತು.

ಧರ್ಮಸ್ಥಳದ ಸಭೆಯ ಯೋಜನೆಗೆ ಬ್ರೇಕ್ ಬಿದ್ದ ಬೆನ್ನಲ್ಲೇ, ಪಕ್ಷದ ಕೆಲವು ನಾಯಕರು ಈ ಇಡೀ ಗೊಂದಲಕ್ಕೆ ವಿಜಯೇಂದ್ರ ಅವರನ್ನೇ ದೂಷಿಸಲು ಆರಂಭಿಸಿದ್ದರು ಎನ್ನಲಾಗಿದೆ. ಇದರಿಂದ ತೀವ್ರ ಬೇಸರಗೊಂಡಿರುವ ರಾಜ್ಯಾಧ್ಯಕ್ಷ ವಿಜಯೇಂದ್ರ, ಈಗ ಶಾಸಕರನ್ನು ಕರೆದೊಯ್ಯುವ ನಿರ್ಧಾರ ಕೈಬಿಟ್ಟು ತಾವು ಒಬ್ಬರೇ ಧರ್ಮಸ್ಥಳಕ್ಕೆ ತೆರಳಲು ನಿರ್ಧರಿಸಿದ್ದಾರೆ ಎನ್ನಲಾಗುತ್ತಿದೆ.

ದೆಹಲಿ ಪ್ರವಾಸದಲ್ಲಿರುವ ವಿಜಯೇಂದ್ರ ಅವರು ಇಂದು ರಾತ್ರಿಯೇ ನೇರವಾಗಿ ಧರ್ಮಸ್ಥಳಕ್ಕೆ ಬರಲಿದ್ದಾರೆ. ನಾಳೆ ಬೆಳಗ್ಗೆ 7 ರಿಂದ 8 ಗಂಟೆಯ ಅವಧಿಯಲ್ಲಿ ಅವರು ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆಯಲಿದ್ದಾರೆ.