ಮಾಣಿಯಿಂದ ಸಂಪಾಜೆಗೆ ಸಂಪರ್ಕಿಸುವ ಹೈ ಸ್ಪೀಡ್ ರಾಷ್ಟ್ರೀಯ ಹೆದ್ದಾರಿ ಚತುಷ್ಪದ ಯೋಜನ ವರದಿ ರೆಡಿ, ಡಿಪಿಆರ್ ಸಲ್ಲಿಸುವಂತೆ ಶಾಸಕ ಅಶೋಕ್ ರೈ ಮನವಿ.- ಕಹಳೆ ನ್ಯೂಸ್

ಪುತ್ತೂರು : ಕೋಟ್ಯಂತರ ರೂ. ವೆಚ್ಚದಲ್ಲಿ ಬಹು ನಿರೀಕ್ಷೆಯ ಪ್ರಾಜೆಕ್ಟ್ ಆಗಿರುವ ಮಾಣಿ-ಸಂಪಾಜೆ ರಾಷ್ಟ್ರೀಯ ಹೆದ್ದಾರಿ ಚತುಷ್ಪದ ಯೋಜನೆಯ ವರದಿ (ಡಿಪಿಆರ್) ಸಿದ್ಧವಾಗಿದ್ದು, ಅದರ ಅಪ್ರೂವಲ್‌ಗಾಗಿ ಸರಕಾರಕ್ಕೆ ಡಿಪಿಆರ್ ವರದಿ ಸಲ್ಲಿಸುವಂತೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಪ್ರಾದೇಶಿಕ ಆಯುಕ್ತರಿಗೆ ಪುತ್ತೂರು ಶಾಸಕ ಅಶೋಕ್ ರೈ ಮನವಿ ಮಾಡಿದ್ದಾರೆ.
ಈಗಾಗಲೇ ರಾಜ್ಯ ಸರಕಾರದ ಮೂಲಕ ೩.೧೯ ಕೋಟಿ ರೂ ವೆಚ್ಚದಲ್ಲಿ ಡಿಪಿಆರ್ ಸಿದ್ದಪಡಿಸಲಾಗಿದೆ. ಲೋಕೋಪಯೋಗಿ ಸಚಿವರಾಗಿದ್ದ ಸತೀಶ್ ಜಾರಕಿಹೊಳಿಯವರ ಮೂಲಕ ಮಾಣಿ- ಸಂಪಾಜೆ ರಾ. ಹೆದ್ದಾರಿ ಚತುಷ್ಪಥ ಯೋಜನೆಯ ಡಿಪಿಆರ್ ಸಿದ್ದಪಡಿಸಿ ಕೆಲ ತಿಂಗಳುಗಳು ಕಳೆದರೂ ಇನ್ನೂ ಅದನ್ನು ಅಪ್ರೂವಲ್‌ಗೆ ರಾಷ್ಟ್ರೀಯ ಹೆದ್ದಾರಿ ಸಚಿವಾಲಯಕ್ಕೆ ಕಳುಹಿಸದ ಕಾರಣ ಈ ಬೃಹತ್ ಯೋಜನೆಗೆ ಹಿನ್ನಡೆಯಾಗಿದೆ ಎಂದು ಅಶೋಕ್ ರೈ ತಿಳಿಸಿದ್ದಾರೆ. ಇಲಾಖಾ ಮಟ್ಟದಲ್ಲಿ ಆಗಬೇಕಾದ ಕೆಲಸಗಳನ್ನು ತಕ್ಷಣವೇ ಮಾಡುವಂತೆ ಅಧಿಕಾರಿಗೆ ಶಾಸಕ ಅಶೋಕ್ ರೈ ಮನವಿ ಮಾಡಿದ್ದಾರೆ. ಮಾಣಿ-ಸಂಪಾಜೆ ಚತುಷ್ಪಥ ಹೆದ್ದಾರಿಯಾದಲ್ಲಿ ಪುತ್ತೂರು ಇನ್ನಷ್ಟು ಅಭಿವೃದ್ದಿಯಾಗುವುದರ ಜೊತೆಗೆ ಪುತ್ತೂರಿನಿಂದ ಮಂಗಳೂರಿಗೆ ಕೇವಲ ಅರ್ಧಗಂಟೆಯಲ್ಲಿ ತಲುಪಬಹುದಾಗಿದೆ.











