ಡೇ-ಕೇರ್‌ನಲ್ಲಿ 2 ವರ್ಷದ ಮಗುವಿಗೆ 25 ಬಾರಿ ಕಚ್ಚಿದ ಮತ್ತೊಂದು ಮಗು – ಪ್ರಕರಣ ದಾಖಲಿಸದಂತೆ 10 ಲಕ್ಷ ರೂ. ಆಫರ್ -ಕಹಳೆ ನ್ಯೂಸ್

ನವದೆಹಲಿ: ಡೇ ಕೇರ್‌ನಲ್ಲಿ(Day Care) ನಡೆದ ನಿರ್ಲಕ್ಷ್ಯದಿಂದ 2 ವರ್ಷದ ಮಗುವೊಂದು ಗಂಭೀರವಾಗಿ ಗಾಯಗೊಂಡಿರುವ ಘಟನೆ ಮಹಾರಾಷ್ಟ್ರದಛತ್ರಪತಿ ಸಂಭಾಜಿನಗರದಲ್ಲಿ ನಡೆದಿದೆ. ಈ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಪೋಷಕರ ಆಕ್ರೋಶಕ್ಕೆ ಕಾರಣವಾಗಿದೆ.
ಜೂನ್ 22ರಂದು ಸಿಐಡಿಸಿಒ ಪ್ರದೇಶದ ಫಸ್ಟ್‌ಕ್ರೈ ಇಂಟೆಲ್ಲಿಟಾಟ್ಸ್ ಪ್ರೀ-ಸ್ಕೂಲ್‌ನಲ್ಲಿ ಈ ಘಟನೆ ನಡೆದಿದೆ. ಬೆಳಗ್ಗೆ 10:30ರ ಸುಮಾರಿಗೆ ವಕೀಲೆಯಾಗಿರುವ ತಾಯಿ ತಮ್ಮ 2 ವರ್ಷದ ಮಗುವನ್ನು ಡೇ ಕೇರ್‌ನಲ್ಲಿ ಬಿಟ್ಟು ಹೋಗಿದ್ದರು.











