
ಬೆಂಗಳೂರು: ಈಗಾಗಲೇ ದಿನನಿತ್ಯದ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಸಂಕಷ್ಟದಲ್ಲಿರುವ ಜನಸಾಮಾನ್ಯರಿಗೆ ಮತ್ತೊಂದು ದೊಡ್ಡ ಹೊಡೆತ ಬಿದ್ದಿದೆ. ರಾಜಧಾನಿ ಬೆಂಗಳೂರಿನಲ್ಲಿ ತರಕಾರಿ ಹಾಗೂ ಸೊಪ್ಪಿನ ದರಗಳು ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಕುಟುಂಬಗಳ ಮಾಸಿಕ ವೆಚ್ಚದ ಮೇಲೆ ಹೆಚ್ಚುವರಿ ಹೊರೆ ಬೀಳುತ್ತಿದೆ.
ಹವಾಮಾನ ವೈಪರೀತ್ಯದ ಪರಿಣಾಮವಾಗಿ ಹಲವಾರು ತರಕಾರಿಗಳ ಬೆಲೆಯಲ್ಲಿ ಭಾರೀ ಏರಿಕೆಯಾಗಿದೆ. ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದ ಕಾರಣ ತರಕಾರಿಗಳ ಇಳುವರಿ ಕಡಿಮೆಯಾಗಿದೆ. ಇದರಿಂದಾಗಿ ತರಕಾರಿ ಬೆಲೆಗಳಲ್ಲಿ ಭಾರೀ ಏರಿಕೆಯಾಗಿದೆ. ಮುಂದಿನ ದಿನಗಳಲ್ಲಿ ಮಳೆಯಾಗದಿದ್ದರೆ ಇಳುವರಿ ಕುಂಠಿತವಾಗಿ, ಮತ್ತಷ್ಟು ಬೆಲೆ ಏರಿಕೆಯಾಗುವ ಸಾಧ್ಯತೆ ಸಹ ಇದೆ.











