ರಾಯಚೂರು: ಗುರುರಾಘವೇಂದ್ರ ಸ್ವಾಮಿಗಳ ಸನ್ನಿಧಿ ಮಂತ್ರಾಲಯದಲ್ಲಿ ಇಂದು (ಜೂ.26) ನಡೆದ ಸಂಗೀತ ಸಂಜೆ ಕಾರ್ಯಕ್ರಮದಲ್ಲಿ ‘ರಾಯರ ದರ್ಶನ’ ಆಲ್ಬಂ ಸಾಂಗ್ ಬಿಡುಗಡೆ ಮಾಡಲಾಯಿತು.

ರಾಯಚೂರು: ಗುರುರಾಘವೇಂದ್ರ ಸ್ವಾಮಿಗಳ ಸನ್ನಿಧಿ ಮಂತ್ರಾಲಯದಲ್ಲಿ ಇಂದು (ಜೂ.26) ನಡೆದ ಸಂಗೀತ ಸಂಜೆ ಕಾರ್ಯಕ್ರಮದಲ್ಲಿ ‘ರಾಯರ ದರ್ಶನ’ ಆಲ್ಬಂ ಸಾಂಗ್ ಬಿಡುಗಡೆ ಮಾಡಲಾಯಿತು.
ಸಂಗೀತ ನಿರ್ದೇಶಕರಾದ ಅಜನೀಶ್ ಬಿ ಲೋಕನಾಥ್, ಸಿಆರ್ ಬಾಬಿ ಹಾಗೂ ಎಬಿಬಿಎಸ್ ಸ್ಟೂಡಿಯೋ ನೇತೃತ್ವದಲ್ಲಿ ಲಕ್ಷ್ಮೀ ಗಣೇಶ ಪ್ರೊಡಕ್ಷನ್‌ನಿಂದ ತಯಾರಾದ ಅಲ್ಬಂ ಸಾಂಗ್ ಬಿಡುಗಡೆ ಕಾರ್ಯಕ್ರಮ ನೆರವೇರಿತು.
ರಾಯರ ಮಠದ ಪೀಠಾಧಿಪತಿ ಸುಬುಧೇಂದ್ರ ತೀರ್ಥ ಸ್ವಾಮಿ ಅಲ್ಬಂ ಸಾಂಗ್ ಬಿಡುಗಡೆ ಮಾಡಿದರು. ಕಾರ್ಯಕ್ರಮದಲ್ಲಿ ಕನ್ನಡ ಚಿತ್ರರಂಗದ ಹಿರಿಯ ನಟರಾದ ಶ್ರೀನಾಥ್, ತಾರಾ, ಗಿರಿಜಾ ಲೋಕೇಶ್, ಮುಖ್ಯಮಂತ್ರಿ ಚಂದ್ರು, ಸುಧಾರಾಣಿ , ನೆನಪಿರಲಿ ಪ್ರೇಮ್ ಸೇರಿದಂತೆ ಹಲವಾರು ಹಿರಿತೆರೆ, ಕಿರುತೆರೆ ಕಲಾವಿದರು ಭಾಗವಹಿಸಿದ್ದರು. ಸಂಗೀತ ಸಂಜೆ ಕಾರ್ಯಕ್ರಮದಲ್ಲಿ ವಿವಿಧ ಕಲಾವಿದರು ಹಾಡು, ನೃತ್ಯಗಳ ಮೂಲಕ ಕಲಾ ಪ್ರದರ್ಶನ ನೀಡಿದರು.