Saturday, June 27, 2026
ಕೊಡಗುಜಿಲ್ಲೆಮಡಿಕೇರಿಸುದ್ದಿ

ಎಲ್‌ಇಡಿ ಬಲ್ಬ್‌ ನುಂಗಿದ ಎಂಟು ತಿಂಗಳ ಕಂದಮ್ಮ – ಕಹಳೆ ನ್ಯೂಸ್

ಮಡಿಕೇರಿ: ಎಂಟು ತಿಂಗಳ ಕಂದಮ್ಮ ಎಲ್‌ಇಡಿ ಬಲ್ಬ್  ನುಂಗಿದ ಘಟನೆ ಕೊಡಗು ಜಿಲ್ಲೆಯ ಮಡಿಕೇರಿ  ನಗರದಲ್ಲಿ ನಡೆದಿದೆ.

ಜಾಹೀರಾತು

ಮನೆಯಲ್ಲಿದ್ದ ವೇಳೆ ಮಗು ಏಕಾಏಕಿ ವಿಪರೀತವಾಗಿ ಅಳಲು ಶುರುಮಾಡಿದ್ದು, ಗಾಬರಿಗೊಂಡ ಪೋಷಕರು ಕಾರಣ ತಿಳಿಯದೇ ಕೂಡಲೇ ಮಡಿಕೇರಿ ನಗರದ ಆಸ್ಪತ್ರೆಗೆ ಕರೆತಂದಿದ್ದಾರೆ. 

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಆಸ್ಪತ್ರೆಯಲ್ಲಿ ವೈದ್ಯಕೀಯ ತಪಾಸಣೆ ನಡೆಸಿದ್ದಾರೆ. ಬಳಿಕ ಎಕ್ಸ್‌ರೇ (X-ray) ತೆಗೆಸಿ ನೋಡಿದಾಗ ಮಗುವಿನ ಗಂಟಲು ಭಾಗದಲ್ಲಿ ಸಣ್ಣ ಲೋಹದ ವಸ್ತು ಇರುವುದನ್ನು ವೈದ್ಯರು ಪತ್ತೆ ಹಚ್ಚಿದ್ದಾರೆ. ಆರಂಭದಲ್ಲಿ ಪಿನ್ ನುಂಗಿರಬಹುದೆಂದು ಶಂಕಿಸಲಾಗಿತ್ತು. ನಂತರ ಲ್ಯಾರಿಂಗೊಸ್ಕೋಪ್ ಪರೀಕ್ಷೆ ನಡೆಸಿದಾಗ ಮಗುವಿನ ಗಂಟಲಲ್ಲಿ ಎಲ್‌ಇಡಿ ಬಲ್ಬ್ ಸಿಲುಕಿರುವುದು ಬೆಳಕಿಗೆ ಬಂದಿದೆ. ಕೂಡಲೇ ಇಎನ್‌ಟಿ (ENT) ತಜ್ಞೆ ಡಾ. ರಾಜಶ್ರಿ ಹಾಗೂ ಮಕ್ಕಳ ತಜ್ಞ ಡಾ. ಖುಶ್ವಂತ್ ಅವರ ತಂಡ ಶಸ್ತ್ರಚಿಕಿತ್ಸೆ ನಡೆಸದೇ ಸುರಕ್ಷಿತವಾಗಿ ಬಲ್ಬ್ ಅನ್ನು ಹೊರತೆಗೆದಿದ್ದಾರೆ.

ಆಟವಾಡುವ ಸಂದರ್ಭದಲ್ಲೇ ಮಗು ಬಲ್ಬ್ ನುಂಗಿರುವ ಸಾಧ್ಯತೆ ಇದೆ ಎಂದು ತಿಳಿದುಬಂದಿದ್ದು, ಸದ್ಯ ಮಗು ಪ್ರಾಣಾಪಾಯದಿಂದ ಪಾರಾಗಿದೆ. ಮಗುವಿನ ಆರೋಗ್ಯ ಸ್ಥಿರವಾಗಿದ್ದು, ವೈದ್ಯರ ಸಮಯೋಚಿತ ಚಿಕಿತ್ಸೆ ಹಾಗೂ ಪೋಷಕರ ತಕ್ಷಣದ ಕ್ರಮದಿಂದ ದೊಡ್ಡ ಅನಾಹುತ ತಪ್ಪಿದೆ.