Monday, September 14, 2026
ಬೆಂಗಳೂರುರಾಜ್ಯಸುದ್ದಿ

ನಿರ್ಮಾಪಕ ಭಾ.ಮಾ.ಹರೀಶ್‌ ಪುತ್ರ ಉಲ್ಲಾಸ್‌ಗೌಡ ನಿಧನ -ಕಹಳೆ ನ್ಯೂಸ್

ಬೆಂಗಳೂರು: ನಿರ್ಮಾಪಕ ಭಾ.ಮಾ.ಹರೀಶ್‌ ಅವರ ಪುತ್ರ ಉಲ್ಲಾಸ್‌ಗೌಡ ಹೃದಯಾಘಾತದಿಂದ ನಿಧನರಾಗಿದ್ದಾರೆ.
ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಮಾಜಿ ಅಧ್ಯಕ್ಷ, ನಿರ್ಮಾಪಕ ಭಾ.ಮಾ.ಹರೀಶ್‌ ಪುತ್ರ ಉಲ್ಲಾಸ್‌ಗೌಡ ಅವರು ಶಿವಮೊಗ್ಗದ ಕೊಡಚಾದ್ರಿಗೆ ಟ್ರೆಕ್ಕಿಂಗ್‌ಗೆ ಹೋಗಿದ್ದರು. ಈ ವೇಳೆ ಅವರಿಗೆ ಹೃದಯಾಘಾತ ಕಾಣಿಸಿಕೊಂಡಿದೆ. ತಕ್ಷಣ ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತು. ಆದರೆ, ಮಾರ್ಗ ಮಧ್ಯೆ ಕೊನೆಯುಸಿರೆಳೆದಿದ್ದಾರೆ.

ಜಾಹೀರಾತು

ಉಲ್ಲಾಸ್‌ಗೌಡ ಅವರು ಐದು ತಿಂಗಳ ಹಿಂದೆಯಷ್ಟೇ ನಿಶ್ಚಿತಾರ್ಥ ಮಾಡಿಕೊಂಡಿದ್ದರು. ಮದುವೆ ಸಂಭ್ರಮದಲ್ಲಿದ್ದ ಮನೆಯಲ್ಲಿ ಈಗ ಸೂತಕದ ಛಾಯೆ ಆವರಿಸಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು